
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 2024-25ರ ಪೂರ್ಣ ಬಜೆಟ್ ಮಂಡಿಸುವ ಮೊದಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಬಜೆಟ್ ಮಂಡನೆಗೂ ಮುನ್ನ ಹಣಕಾಸು ಸಚಿವಾಲಯದ ನಾರ್ತ್ ಬ್ಲಾಕ್ ಕಚೇರಿಗೆ ಬಂದಿದ್ದ ಸಚಿವೆ, ಅಲ್ಲಿಂದ ಡಿಜಿಟಲ್ ಸ್ವರೂಪದಲ್ಲಿರುವ ಬಜೆಟ್ ಪ್ರತಿಯೊಂದಿಗೆ ರಾಷ್ಟ್ರಪತಿ ಭವನಕ್ಕೆ ತೆರಳಿ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ತಮ್ಮ ತಂಡದೊಂದಿಗೆ ಕೆಂಪು ಬಣ್ಣದ 'ಬಹಿ ಖಾತಾ' ಡಿಜಿಟಲ್ ಟ್ಯಾಬ್ಲೆಟ್‌ನೊಂದಿಗೆ ಬಜೆಟ್ ಪ್ರತಿ ಹಿಡಿದು ಫೋಟೋವನ್ನು ತೆಗಿಸಿಕೊಂಡಿದ್ದಾರೆ. ನಂತರ ದ್ರೌಪದಿ ಮುರ್ಮು ಅವರು ಸಂಪ್ರದಾಯದಂತೆ ನಿರ್ಮಲಾ ಸೀತಾರಾಮನ್ ಅವರಿಗೆ ಮೊಸರು ಮತ್ತು ಸಕ್ಕರೆಯನ್ನು ತಿನ್ನಿಸಿದರು.
ಈ ಬಾರಿಯ ಬಜೆಟ್‌ನಲ್ಲಿ ಹಲವು ನಿರೀಕ್ಷೆಗಳಿವೆ. ಈ ಬಜೆಟ್ ವಿಕಸಿತ ಭಾರತ ಧ್ಯೇಯವನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಇದರೊಂದಿಗೆ ಇದು ಆದಾಯ ತೆರಿಗೆ ರಚನೆಯಲ್ಲಿ ಬದಲಾವಣೆ ತರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ
Poll (Public Option)

Post a comment
Log in to write reviews