
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಇಂದು ಮಹಿಷ ಮಂಡಲೋತ್ಸವ ಆಚರಣೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ಮಧ್ಯಾಹ್ನದವರೆಗೂ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಅವಕಾಶವಿರುವುದಿಲ್ಲ. ಸದ್ಯ ದಸರಾ ಹಿನ್ನೆಲೆಯಲ್ಲಿ ಸದ್ಯ ಬೆಟ್ಟದ ಮಹಿಷಾಸುರ ಪ್ರತಿಮೆಗೆ ಬಣ್ಣ ಬಳಿಯುವ ಕೆಲಸ ನಡೆಯುತ್ತಿದ್ದು, ಬಣ್ಣ ಒಣಗುವ ತನಕ ಪ್ರತಿಮೆಗೆ ಧೂಳು ಅಂಟದಂತೆ ಬಟ್ಟೆ ಹೊದಿಕೆ ಮಾಡಲಾಗಿದೆ.
ಇನ್ನು ಮೈಸೂರು ನಗರದಲ್ಲಿ ಮಹಿಷ ದಸರಾ ಆಚರಣೆ ಮಾಡಲು ಮಹಿಷಾ ದಸರಾ ಆಚರಣೆ ಸಮಿತಿಯಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದರ ಮಧ್ಯೆ ಈಗಾಗಲೇ ಮಹಿಷಾ ದಸರಾಗೆ ಪ್ರತಾಪ್ ಸಿಂಹ ವಿರೋಧ ವ್ಯಕ್ತಪಡಿಸಿದ್ದು, ಇದೀಗ ಮತ್ತೊಮ್ಮೆ ಕಿಡಿಕಾರಿದ್ದಾರೆ.
Poll (Public Option)

Post a comment
Log in to write reviews