
ಗದಗ: ಆಸ್ತಿ ವಿವಾದ ಹಿನ್ನೆಲೆ ಅಣ್ಣನೇ ತಂಗಿಯನ್ನು ಚಾಕುವಿನಿಂದ ಇರಿದು ಕೊಂದಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಅನ್ನದಾನೀಶ್ವರ ನಗರದಲ್ಲಿ ನಡೆದಿದೆ. ಖುರ್ಷಿದಾ (35) ಕೊಲೆಯಾದ ಮತೃ ಮಹಿಳೆ.
ಆಸ್ತಿ ವಿಷಯದಲ್ಲಿ ಜಗಳ ಶುರುವಾಗಿ, ಜಗಳ ವಿಕೋಪಕ್ಕೆ ತಿರುಗಿ ಆರೋಪಿ ಈಶ್ವರಪ್ಪ ಕ್ಯಾದಿಗೇಹಳ್ಳಿ ಎಂಬಾತ ತಂಗಿ ಕಾಳಮ್ಮ ಅವರಿಗೆ ಹೊಟ್ಟೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಬಳಿಕ ನೇರವಾಗಿ ಪೊಲೀಸ್ ಠಾಣೆಗೆ ಬಂದಿದ್ದಾನೆ. ಸಧ್ಯ ಸ್ಥಳಕ್ಕೆ ಗದಗ ಹೆಚ್ಚುವರಿ ಎಸ್ಪಿ ಎಂ ಬಿ ಸಂಕದ ಹಾಗೂ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ಮಹಿಳೆ 14 ವರ್ಷದ ಹಿಂದೆ ಕಟಿಂಗ್ ಸಲೂನ್ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದರು. ಬಳಿಕ 2020 ರಲ್ಲಿ ಮೈಬೂಬ್ ಬೆಟಗೇರಿ ಎಂಬಾತನ ಜೊತೆ ಎರಡನೇ ಮದುವೆಯಾಗಿ ಜೀವನ ನಿರ್ವಹಣೆಗಾಗಿ ಅಣ್ಣನ 15 ಎಕರೆ ಜಮೀನಿನಲ್ಲಿ ಪಾಲು ಕೇಳಿದ್ದ ಖುರ್ಷಿದಾ, ಕೋರ್ಟ್ ಮೆಟ್ಟಿಲೇರಿದ್ದಳು. ಈ ಹಿನ್ನಲೆ ಇಂದು ಮನೆಗೆ ಬಂದು ಕೇಸ್ ವಾಪಸ್ ಪಡೆಯವಂತೆ ಅಣ್ಣ ಒತ್ತಾಯ ಮಾಡಿದ್ದಾನೆ. ಆದರೆ, ಅಣ್ಣನ ಮಾತು ಕೇಳದೆ ವಾಗ್ವಾದಕ್ಕಿಳಿದಿದ್ದ ತಂಗಿಯನ್ನು ಸಿಕ್ಕ ಸಿಕ್ಕಲ್ಲಿ ಮನಬಂದಂತೆ ಚಾಕು ಇರಿದು ಬಳಿಕ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ನಂತರ ತಾನೇ ಮುಂಡರಗಿ ಪೊಲೀಸರಿಗೆ ಶರಣಾಗಿದ್ದಾನೆ.
Poll (Public Option)

Post a comment
Log in to write reviews