
ಬಾಗಲಕೋಟೆ: ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ, ಜನತಾ ಪಾರ್ಟಿಯ ಜಿಲ್ಲಾ ಅಧ್ಯಕ್ಷ ಎಸ್.ಟಿ.ಪಾಟೀಲ್ ಅವರ ನೇತೃತ್ವದಲ್ಲಿ ಇಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನದೆಸಿದ್ದಾರೆ.
ಜನತಾ ಪಾರ್ಟಿಯ ಜಿಲ್ಲಾ ಅಧ್ಯಕ್ಷ ಎಸ್.ಟಿ.ಪಾಟೀಲ್ ಅವರ ನೇತೃತ್ವದಲ್ಲಿ, ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕ್ ಪಟ್ಟಣದ ಅಕ್ಕ ಮಹಾದೇವಿ ಕಲ್ಯಾಣ ಮಂಟಪದಿಂದ ಪಿಎಲ್ಡಿ ಬ್ಯಾಂಕ್ ಅವರಣದ ವರೆಗೆ ನಡೆಸಲಾಯಿತು.ಈ ಪ್ರತಿಭಟನೆಯಲ್ಲಿ ಡೀಸೆಲ್ ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಮುಖಂಡರು ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ವಾಲ್ಮೀಕಿ ಮಂಡಳಿಯ ದಲಿತರ ಹಣ ಕೋಟಿ ಗಟ್ಟಲೆ ಲೂಟಿ ಹೊಡೆದ ರಾಜ್ಯ ಸರ್ಕಾರಕ್ಕೆ ದಿಕ್ಕಾರ ಹಾಗೆಯೇ ಸಿದ್ದರಾಮಯ್ಯ ನವರು ರಾಜೀನಾಮೆ ಕೊಡಬೇಕು ಎಂದು ಘೋಷಣೆ ಕೂಗುತ್ತಾ ಬೃಹತ್ ಪ್ರತಿಭಟನೆ ನಡೆಸಿದರು.
Poll (Public Option)

Post a comment
Log in to write reviews