
ಮಂಗಳೂರು: ಕೇಂದ್ರ ಬಿಜೆಪಿ ಸರ್ಕಾರದ ಅವ್ಯವಸ್ಥೆಯಿಂದಾಗಿ ಯುಜಿಸಿ - ನೆಟ್ ಪರೀಕ್ಷೆ ರದ್ದಾಗಿದೆ. ಇದನ್ನ ಖಂಡಿಸಿ ಎನ್ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರು ಜ್ಯೋತಿ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.
ಎನ್‌ಟಿಎ ನಡೆಸುವ ಕೇಂದ್ರಿಕೃತ ನೀಟ್ ಪರೀಕ್ಷೆಯನ್ನು ರದ್ದುಪಡಿಸಿ, ನೀಟ್ ಪರೀಕ್ಷೆ ನಡೆಸಲು ಆಯಾ ರಾಜ್ಯಗಳಿಗೆ ಸ್ವಾಯತ್ತತೆ ನೀಡಬೇಕೆಂದು ಇದೇ ಸಂದರ್ಭದಲ್ಲಿ ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ಎನ್ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಸುಖ್ವಿಂದರ್ ಸಿಂಗ್, ನಜೀಬ್ ಮಂಚಿ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಕ್ರಿಸ್ಟನ್ ಮಿನೇಜಸ್, ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸಫ್ವಾನ್ ಸರವು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ರೋನ್ಸ್ಟನ್ ಸಿಕ್ವೇರಾ, ವಿಶಾಲ್, ಸೋಹಾನ್, ಸೃಜನ್, ಫಾರೂಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
Poll (Public Option)

Post a comment
Log in to write reviews