ಪೌರಕಾರ್ಮಿಕರ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೈಗೆ ಕಪ್ಪುಬಟ್ಟೆ ಧರಿಸಿ ಪ್ರತಿಭಟನೆ

ಧಾರವಾಡ: ಪೌರಕಾರ್ಮಿಕರ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರು ಮತ್ತು ನೌಕರರ ಸಂಘದಿಂದ ಮೊದಲ ದಿನ ಕೈಗೆ ಕಪ್ಪುಬಟ್ಟೆ ಧರಿಸಿ ಬೃಹತ್ ಪ್ರತಿಭಟನೆ ಮಾಡಿದ್ದಾರೆ.
ಕೇಂದ್ರ ಕಚೇರಿ ಹುಬ್ಬಳ್ಳಿಯಲ್ಲಿ ಜುಲೈ.18ರಂದು ಮೊದಲ ದಿನ ಕೈಗೆ ಕಪ್ಪುಬಟ್ಟೆ ಧರಿಸಿ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ, ಅಮರಣಾಂತ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದರು.
“ಪೌರಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರ 2017ರಲ್ಲಿ ಆದೇಶ ಹೊರಡಿಸಿದೆ. ಆದರೆ 8 ವರ್ಷಗಳು ಗತಿಸಿದರೂ 134 ಪೌರಕಾರ್ಮಿಕರ ಹುದ್ದೆಗಳನ್ನು ಖಾಯಂಗೊಳಿಸಿಲ್ಲ. ಪೌರಕಾರ್ಮಿಕ ಕೆಲಸ ಖಾಯಂಗೊಳ್ಳುವ ಕನಸು ಕಂಡು ಹೋರಾಟ ಮಾಡಿದ ಸುಮಾರು 200 ಮಂದಿ ಪೌರಕಾರ್ಮಿಕರು ಮೃತಪಟ್ಟಿದ್ದಾರೆ. 100ಕ್ಕೂ ಅಧಿಕ ಮಂದಿ ಪೌರಕಾರ್ಮಿಕರು 60 ವರ್ಷ ಮೇಲ್ಪಟ್ಟು ನಿವೃತ್ತಿ ಹೊಂದಿ ಪಾಲಿಕೆಯಿಂದ ಯಾವುದೇ ಸೌಲಭ್ಯ ಇಲ್ಲದೆ ಬೀದಿ ಪಾಲಾಗಿದ್ದಾರೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
Poll (Public Option)

Post a comment
Log in to write reviews