
ಬೆಂಗಳೂರು: ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣಕ್ಕೆ (POCSO) ಸಂಬಂಧಿಸಿದಂತೆ ಪ್ರಕರಣದ ತನಿಖಾಧಿಕಾರಿಯಾಗಿ ಪುನೀತ್ ಅವರನ್ನು ನೇಮಕ ಮಾಡಲಾಗಿದೆ. ಸಿಐಡಿ ವರ್ಗಾವಣೆ ಬಳಿಕ ಡಿವೈಎಸ್ಪಿ ಪೃಥ್ವಿ ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದರು. ಈಗ ಪೃಥ್ವಿ ಸಿಐಡಿಯಿಂದ (CID) ವರ್ಗಾವಣೆ ಹಿನ್ನೆಲೆ ಪ್ರಕರಣದ ತನಿಖಾಧಿಕಾರಿಯಾಗಿ ಡಿವೈಎಸ್‌ಪಿ ಪುನೀತ್ ನೇಮಕಗೊಂಡಿದ್ದಾರೆ. ಸಿಐಡಿ ಡಿವೈಎಸ್‌ಪಿ ಪುನೀತ್ ಅವರು ಬಿಎಸ್ ಯಡಿಯೂರಪ್ಪ ಅವರನ್ನು ವಿಚಾರಣೆ ನಡೆಸಲಿದ್ದಾರೆ.
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪವನ್ನು ಬಿಎಸ್ ಯಡಿಯೂರಪ್ಪ ಎದುರಿಸುತ್ತಿದ್ದು, ಪ್ರಕರಣ ದಾಖಲಾಗಿ ಮೂರು ತಿಂಗಳ ಬಳಿಕ ಇಂದು ಸಿಐಡಿ ಮುಂದೆ ಹಾಜರಾಗಿದ್ದಾರೆ. ಮಾರ್ಚ್ 14 ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿತ್ತು.
Poll (Public Option)

Post a comment
Log in to write reviews