
ಬಳ್ಳಾರಿ : ನಗರ, ಗ್ರಾಮೀಣ ಪ್ರದೇಶ ನೈರ್ಮಲ್ಯ ಕಾಪಾಡಲು ಸರಕಾರ ಪಣ ತೊಟ್ಟಿದ್ದು ನಗರ ಹಾಗೂ ಗ್ರಾಮೀಣ ಪ್ರದೇಶ - ವ್ಯಾಪ್ತಿಯ ರಸ್ತೆ ಬದಿಯಲ್ಲಿ ಸಾರ್ವಜನಿಕರು ತ್ಯಾಜ್ಯ ಸುರಿದರೂ ಅಧಿಕಾರಿಗಳಿಗೆ ತಕ್ಕ ಶಾಸ್ತಿ ತಪ್ಪಿದ್ದಲ್ಲ!
ಸಾರ್ವಜನಿಕ ನೈರ್ಮಲ್ಯ ಕಾಪಾಡಲು ಪಣತೊಟ್ಟಿರುವ ರಾಜ್ಯ ಸರಕಾರ, ಗ್ರಾಮ ಪಂಚಾಯಿತಿ ಹಾಗೂ ನಗರ, ಪಟ್ಟಣ ಸ್ಥಳೀಯ ಸಂಸ್ಥೆಗಳ ರಸ್ತೆಯ ಮೇಲೆ ಕಸದ ರಾಶಿ ಕಂಡುಬಂದರೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಸಿಇಒಗಳೇ ತಕ್ಷಣ ಕಾರ್ಯೋನ್ಮುಖರಾಗಬೇಕು ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್ ಬರೆದಿರುವ ಪತ್ರದಲ್ಲಿ ಖಡಕ್ ಸಂದೇಶ ರವಾನಿಸಿದ್ದಾರೆ.
ರಸ್ತೆ ಬದಿ ತ್ಯಾಜ್ಯ ಎಸೆಯದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಅಧಿಕಾರಿಗಳು ಮುಂದಾಗ ಬೇಕಿದೆ. ನೈರ್ಮಲ್ಯ ಕಾಪಾಡುವ ಕಾರ್ಯ ಇತರ ದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಗಂಭೀರ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ಎಚ್ಚರಿಸಿದ್ದಾರೆ.
Poll (Public Option)

Post a comment
Log in to write reviews