
ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದಿರುವುದಕ್ಕೆ ಪಕ್ಷದ ನಾಯಕರ ವಿರುದ್ದ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಬೇಸರ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಮಹಿಳಾ ಘಟಕ ಅಧ್ಯಕ್ಷೆ ಪುಷ್ಪ ಅಮರನಾಥ್, ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದ ಕಾರಣ ಕಣ್ಣೀರು ಬರುತ್ತದೆ, ಆದರೂ ತಡೆದುಕೊಂಡಿದ್ದೇನೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಚಾಮರಾಜನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಈ ಹಿಂದೆಯೂ ಪರಿಷತ್ ಚುನಾವಣೆ ಟಿಕೆಟ್ ಕೇಳಿದಾಗ ಕೊಡಲಿಲ್ಲ. ಆಗ ಡಾ.ಡಿ.ತಿಮ್ಮಯ್ಯಗೆ ಟಿಕೆಟ್ ಕೊಟ್ಟರು. ಟಿಕೆಟ್ ಹಂಚಿಕೆ ಮಾಡುವಾಗ ನಾನು ಮಹಿಳೆ ಎಂದು ಪರಿಗಣಿಸದೆ ನಾನು ದಲಿತ ಸಮುದಾಯದ ಬಲಗೈ ಪಂಗಡಕ್ಕೆ ಸೇರಿದವಳೆಂದು ಪರಿಗಣಿಸಿ ಎಡಗೈ ಪಂಗಡಕ್ಕೆ ಟಿಕೆಟ್ ಕೊಟ್ಟರು. ಆದರೆ ಸಚಿವ ಮಹದೇವಪ್ಪನವರ ಪುತ್ರ ಸುನಿಲ್ ಬೋಸ್ ಗೆ ಟಿಕೆಟ್ ಕೊಟ್ಟರು. ಟಿಕೆಟ್ ನೀಡುವಾಗಲೂ ಮಹಿಳೆ, ಜಾತಿ ಅಂತೆಲ್ಲಾ ಪರಿಗಣಿಸುವುದು ಬೇಸರ ಉಂಟುಮಾಡಿದೆ ಎಂದು ಪಕ್ಷದ ನಾಯಕರ ವಿರುದ್ದವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳಾ ಮೀಸಲಾತಿ ಇಲ್ಲದಿದ್ದರೇ ಮಹಿಳೆಯರು ರಾಜಕೀಯಕ್ಕೆ ಬರಲು ಕೂಡ ಆಗುತ್ತಿರಲಿಲ್ಲ. ಮೀಸಲಾತಿ ಇರುವುದರಿಂದ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರು ರಾಜಕಾರಣಕ್ಕೆ ಬರಲು ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಾದರೂ ಸೂಕ್ತ ಸ್ಥಾನಮಾನ ಸಿಗುತ್ತದೆ ಎಂಬ ವಿಶ್ವಾಸದಲ್ಲಿದ್ದೇನೆ ಎಂದಿದ್ದಾರೆ.
Poll (Public Option)

Post a comment
Log in to write reviews