
ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಬೇಕು ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಜಗದ್ಗುರು ಚಂದ್ರಶೇಖರ್ ಸ್ವಾಮಿಜಿ ಹೇಳಿದ್ದರು. ಈ ಕುರಿತು ನವದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಕ್ಕಲಿಗ ಸ್ವಾಮೀಜಿಗಳ ವಿರುದ್ಧ ಏಕವಚನ ಪ್ರಯೋಗ ಮಾಡಿದ್ದಾರೆ ಎಂದು ಆರೋಪಿಸಿ ವಿರೋಧ ಪಕ್ಷದ ನಾಯಕ ಆರ್ ಅಶೋಕ ಕಿಡಿಕಾರಿದ್ದಾರೆ.
ಕೇಸರಿ, ಕುಂಕುಮ ಕಂಡರೆ ದ್ವೇಷ ಕಾರುವ ಸಿಎಂ ಸಿದ್ದರಾಮಯ್ಯ ಅವರು, ಈಗ ಒಕ್ಕಲಿಗ ಸ್ವಾಮೀಜಿಗಳ ವಿರುದ್ಧ ಏಕವಚನ ಪ್ರಯೋಗ ಮಾಡಿ ನಿಂದಿಸುವ ಮೂಲಕ ಮತ್ತೊಮ್ಮೆ ತಮ್ಮ ಹಿಂದೂ ವಿರೋಧಿ ಧೋರಣೆ ಪ್ರದರ್ಶನ ಮಾಡಿದ್ದಾರೆ. ಸ್ವಾಮಿ ಸಿದ್ದರಾಮಯ್ಯನವರೇ, ನಿಮ್ಮ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ವೈಮನಸ್ಸು ಇದ್ದರೆ, ಅದನ್ನ ಪಕ್ಷದ ವೇದಿಕೆಯಲ್ಲಿ ನಾಲ್ಕು ಗೋಡೆಗಳ ಮಧ್ಯೆ ಪರಿಹರಿಸಿಕೊಳ್ಳಿ. ಅದನ್ನ ಬಿಟ್ಟು, ಸ್ವಾಮೀಜಿಗಳು ವ್ಯಕ್ತಪಡಿಸಿದ ಅಭಿಪ್ರಾಯದ ಬಗ್ಗೆ ಈ ರೀತಿ ಅಗೌರವದಿಂದ ಮಾತನಾಡುವುದು ನಿಮಗೆ ಶೋಭೆ ತರುವುದಿಲ್ಲ. ಒಕ್ಕಲಿಗ ಸಮುದಾಯ ಇದನ್ನ ತೀವ್ರವಾಗಿ ಖಂಡನೆ ಮಾಡುತ್ತದೆ ಎಂದು ಆರ್ ಅಶೋಕ ಎಕ್ಸ್ ಖಾತೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.
Poll (Public Option)

Post a comment
Log in to write reviews