
ದಕ್ಷಿಣ ಕನ್ನಡ: ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಿಂದ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಭಾಗದ ಪ್ರದೇಶಗಳು ಜಲಾವೃತಗೊಂಡಿದೆ . ನೇರೆ ಪೀಡಿತ ಪ್ರದೇಶಗಳಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಬಿಜೆಪಿ ಹಿರಿಯ ನಾಯಕ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯಕ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.
ಬಳಿಕ ಆರ್. ಅಶೋಕ, ರಾಜ್ಯದಲ್ಲಿ ಭಾರಿ ಮಳೆಯಿಂದ ಬಹಳಷ್ಟು ಹಾನಿಯಾಗಿದ್ದು, 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ರಾಜ್ಯ ಸರ್ಕಾರ ಸಂತ್ರಸ್ತರಿಗೆ ಸೂಕ್ತ ರೀತಿಯಲ್ಲಿ ಪರಿಹಾರ ಹಾಗೂ ಇತರೆ ಸೌಲಭ್ಯ ಒದಗಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದರು.
Poll (Public Option)

Post a comment
Log in to write reviews