ಬೆಂಗಳೂರು: ಟ್ರಾಫಿಕ್ ಜಾಮ್ ಸ್ಪಾಟ್ ಅಂದರೆ ಅದು ಸಿಲ್ಕ್ ಬೋರ್ಡ್ ಜಂಕ್ಷನ್. ಈ ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಟ್ರಾಫಿಕ್ ಕಡಿಮೆ ಮಾಡಿ ವಾಹನಗಳ ಓಡಾಟಕ್ಕೆ ಅನಕೂಲ ಮಾಡಿಕೊಡುವ ದೃಷ್ಟಿಕೋನದಿಂದ ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್ ಜಂಕ್ಷನ್‌ವರೆಗೆ ಡಬಲ್ ಡೆಕ್ಕರ್ ಫ್ಲೈ ಓವರ್ ಉದ್ಘಾಟನೆಗೆ ಸಿದ್ಧಗೊಂಡಿದೆ.
ಜೂನ್ ಕೊನೆಯಲ್ಲೇ ಎಲ್ಲ ಕೆಲಸಗಳು ಮುಗಿದಿದ್ದು, ಮೇಲ್ಸೇತುವೆ ಉದ್ಘಾಟನೆ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಡಬಲ್ ಡೆಕ್ಕರ್ ಫ್ಲೈ ಓವರ್ ಉದ್ಘಾಟನೆಗೆ ಪ್ರಸ್ತಾವನೆ ಸಲ್ಲಿಸಿದ ಬಗ್ಗೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶವಂತ್ ಚವಾಣ್ ಮಾಹಿತಿ ನೀಡಿದ್ದಾರೆ.
3.36 ಕಿಮೀ ಉದ್ದದ ಫ್ಲೈಓವರ್
3.36-ಕಿಮೀ ಉದ್ದದ ಈ ಫ್ಲೈಓವರ್ ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಪ್ರಾರಂಭವಾಗಿ ಮೇಟ್ರೊ ಹಳದಿ ರೇಖೆಯ ಕೆಳಗೆ ಅಂದರೆ ಸಿಲ್ಕ್ ಬೋರ್ಡ್ ಜಂಕ್ಷನ್ ವರೆಗೆ ಸಾಗಿದೆ. ಸರ್ಕಾರ ಸೂಚನೆ ಕೊಟ್ಟರೆ ಉದ್ಘಾಟನೆಗೊಂಡು ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಅತ್ತ ಮೆಟ್ರೋ ಹಳದಿ ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ ನಡೆಯುತ್ತಿದ್ದು, ಡಿಸೆಂಬರ್‌ಮೊದಲ ವಾರದಲ್ಲಿ ಮೆಟ್ರೋಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Post a comment
Log in to write reviews