2024-09-19 09:20:54

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಾಗಿಣಿ ದ್ವಿವೇದಿ ನಟನೆಯ “ಬಿಂಗೊ”ಚಿತ್ರದ ಡಬ್ಬಿಂಗ್ ಕಂಪ್ಲೀಟ್

ಶಂಭೋ ಶಿವ ಶಂಕರ” ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದಲ್ಲಿ, ಆರ್.ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ ನಾಯಕ-ನಾಯಕಿಯಾಗಿ ನಟಿಸಿರುವ ಬಿಂಗೊ ಚಿತ್ರದ ಡಬ್ಬಿಂಗ್ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ ಮುಕ್ತಾಯವಾಗಿದೆ.
ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ನ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ. ಮೇ 24 ರಂದು ನಟಿ ರಾಗಿಣಿ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ “ಬಿಂಗೊ” ಚಿತ್ರತಂಡ ರಾಗಿಣಿ ಅವರಿಗೆ ಶುಭಾಶಯ ತಿಳಿಸಿದೆ. ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ , ರಾಜೇಶ್ ನಟರಂಗ, ಪವನ್, ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹಿತನ್ ಹಾಸನ್ ಸಂಗೀತ ನೀಡಿರುವ ಮೂರು ಹಾಡುಗಳು ಈ ಚಿತ್ರದಲ್ಲಿದೆ. ಸದ್ಯದಲ್ಲೇ ಹಾಡುಗಳು ಹಾಗೂ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.
ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿದ್ದು, ನರಸಿಂಹ ಸಾಹಸ ನಿರ್ದೇಶನ ಮಾಡಿದ್ದಾರೆ. ಕಂಬಿ ರಾಜು ಅವರ ನೃತ್ಯ ನಿರ್ದೇಶನ ಹಾಗೂ ವೆಂಕಿ ಸಂಕಲನ “ಬಿಂಗೊ”ಚಿತ್ರಕ್ಕಿದೆ.
 

Post a comment

No Reviews