2024-12-24 06:11:12

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಾಜಸ್ಥಾನ್​ ರಾಯಲ್ಸ್​ ನೂತನ ಕೋಚ್‌ ಆಗಿ ರಾಹುಲ್‌ ದ್ರಾವಿಡ್‌?

ಬೆಂಗಳೂರು: ಟೀಮ್​ ಇಂಡಿಯಾದ ಮಾಜಿ ಕೋಚ್​ ರಾಹುಲ್​ ದ್ರಾವಿಡ್(Rahul Dravid) ಅವರು​ ಮುಂದಿನ ಐಪಿಎಲ್(IPL 2025)ನಲ್ಲಿ ರಾಜಸ್ಥಾನ್​ ರಾಯಲ್ಸ್​ ತಂಡದ ​ ಕೋಚಿಂಗ್​ ನಡೆಸುವುದು ಬಹುತೇಕ ಖಚಿತ ಎಂದು ತಿಳಿದುಬಂದಿದೆ. ಸದ್ಯ ರಾಜಸ್ಥಾನ್ ತಂಡದ ಹಾಲಿ ಕೋಚ್​ ಆಗಿರುವ ಶ್ರೀಲಂಕಾದ ಮಾಜಿ ಆಟಗಾರ ಕುಮಾರ ಸಂಗಕ್ಕರ ಇಂಗ್ಲೆಂಡ್​ ಸೀಮಿತ ತಂಡದ ಕೋಚ್​ ಆಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಅವರ ಸ್ಥಾನಕ್ಕೆ ದ್ರಾವಿಡ್​ ಅವರನ್ನು ನೇಮಕ ಮಾಡಲು ಫ್ರಾಂಚೈಸಿ ಮುಂದಾಗಿದೆ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ ದ್ರಾವಿಡ್​ ಜತೆ ಈಗಾಗಲೇ ಫ್ರಾಂಚೈಸಿ ಮಾತುಕತೆ ನಡೆಸಿದ್ದು ದ್ರಾವಿಡ್​ ಕೂಡ ಇದಕ್ಕೆ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ. ಆದರೆ, ಯಾವುದೇ ಅಧಿಕೃತ ಮಾಹಿತಿ ಇನ್ನೂ ಪ್ರಕಟಗೊಂಡಿಲ್ಲ. ಈ ಹಿಂದೆ ದ್ರಾವಿಡ್​ ರಾಜಸ್ಥಾನ್ ರಾಯಲ್ಸ್​(Rajasthan Royals) ತಂಡದ ಪರವೇ 2 ಆವೃತ್ತಿಯಲ್ಲಿ ಕೋಚಿಂಗ್​ ನಡೆಸಿದ್ದರು. ಅಂಡರ್ 19 ತಂಡದ ಕೋಚ್ ಆದ ಕಾರಣ ಐಪಿಎಲ್​ ಕೋಚಿಂಗ್​ನಿಂದ ದೂರ ಉಳಿದಿದ್ದರು.

ರಾಜಸ್ಥಾನ್ ರಾಯಲ್ಸ್ ಪರ ನಾಯಕರಾಗಿ ದ್ರಾವಿಡ್ ಒಮ್ಮೆ ತಂಡವನ್ನು ಪ್ಲೇ ಆಪ್​ಗೆ ಕೊಂಡೊಯ್ದಿದ್ದರು. ಚಾಂಪಿಯನ್ಸ್ ಲೀಗ್​ನಲ್ಲಿ ತಂಡ ಫೈನಲ್​ಗೇರಿತ್ತು. ರಾಜಸ್ಥಾನ್ ತಂಡದ ಪರ 40 ಪಂದ್ಯಗಳಲ್ಲಿ ನಾಯಕರಾಗಿದ್ದ ದ್ರಾವಿಡ್ 23 ಗೆಲುವು ಕಂಡಿದ್ದಾರೆ. ಇದೀಗ ಎಲ್ಲ ಬಿಸಿಸಿಐ ಹುದ್ದೆಗಳಿಂದ ನಿವೃತ್ತಿ ಹೊಂದಿರುವ ದ್ರಾವಿಡ್​ ಮತ್ತೆ ಐಪಿಎಲ್​ ಕೋಚಿಂಗ್​ ಕಡೆ ಗಮನಹರಿಸಿದ್ದಾರೆ ಎನ್ನಲಾಗಿದೆ.

Post a comment

No Reviews