ರಾಯ್ ಬರೇಲಿ ಕ್ಷೇತ್ರದಲ್ಲೇ ಮುಂದುವರಿದ ರಾಹುಲ್ ಗಾಂಧಿ! ಸಹೋದರಿ ಪ್ರಿಯಾಂಕಾಗೆ ವಯನಾಡ್ ಕ್ಷೇತ್ರ ಫಿಕ್ಸ್!

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ರಾಜಿನಾಮೆ ಕೊಟ್ಟು ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ತೆರವಾದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ರಾಹುಲ್ ಸಹೋದರಿ ಪ್ರಿಯಾಂಕ ವಾದ್ರಾ ಸ್ಪರ್ದೆ ಮಾಡಲಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಚೊಚ್ಚಲ ಚುನಾವಣೆ ಅಖಾಡಕ್ಕೆ ಇಳಿಯುತ್ತಿದ್ದಾರೆ ಪ್ರಿಯಾಂಕಾ ಗಾಂಧಿ ವಾದ್ರಾ.
ಪ್ರಿಯಾಂಕಾ ವಾದ್ರಾ 2019ರಲ್ಲಿ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸುತ್ತಾರೆ. ನಂತರ ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎದುರಾಳಿಯಾಗುವ ಸಾಧ್ಯತೆ ಇದೆ ಎಂಬ ಮಾತು ರಾಜಕೀಯವಲಯದಲ್ಲಿ ಭಾರಿ ಸದ್ದು ಮಾಡಿತ್ತು. ನಂತರ ರಾಯ್ ಬರೇಲಿಯಿಂದ ಸೋನಿಯಾ ಗಾಂಧಿ ಅವರ ಉತ್ತರಾಧಿಕಾರಿ ಎಂಬ ಮಾತು ಜೋರಾಗಿ ಕೇಳಿ ಬಂದಿತ್ತು. ಆದರೆ ಇದು ಯಾವುದು ಕಾರ್ಯರೂಪಕ್ಕೆ ಬಂದಿರಲಿಲ್ಲ. ಆದರೆ ಇದೀಗ ಅವರು ಚುನಾವಣಾ ಅಖಾಡಕ್ಕೆ ಸಜ್ಜಾಗಿದ್ದು, ಸಹೋದರ ರಾಹುಲ್ ಗಾಂಧಿ ಸತತ ಎರಡನೇ ಅವಧಿಗೆ ಗೆದ್ದಿರುವ ವಯನಾಡ್ ಲೋಕಸಭಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ತಮ್ಮ ರಾಜಕೀಯ ಅಗ್ನಿ ಪರೀಕ್ಷೆಗೆ ಮುಂದಾಗಿದ್ದಾರೆ ಪ್ರಿಯಾಂಕಾ ಗಾಂಧಿ.
ಈ ಕುರಿತು ಪ್ರತಿಕ್ರಿಯಿಸಿರುವ ಪ್ರಿಯಾಂಕಾ, ತಮಗೆ ಯಾವುದೇ ಆತಂಕವಿಲ್ಲ, ವಯನಾಡ್ ಕ್ಷೇತ್ರದಿಂದ ಪ್ರತಿನಿಧಿಸುತ್ತಿರುವುದು ಹೆಚ್ಚು ಸಂತೋಷ ನೀಡಿದೆ. ವಯನಾಡ್ ಜನತೆ ರಾಹುಲ್ ಅನುಪಸ್ಥಿತಿಯ ಕೊರತೆ ಅನುಭವಿಸದಂತೆ ಸದಾ ಕ್ಷೇತ್ರದ ಜನರೊಂದಿಗೆ ಬೆರೆಯುವುದಾಗಿ ತಿಳಿಸಿದ್ದಾರೆ.
Poll (Public Option)

Post a comment
Log in to write reviews