
ನವದೆಹಲಿ : ಲೋಕಸಭೆ ವಿರೋಧ ಪಕ್ಷದ ಕಾಂಗ್ರೆಸ್ ನಾಯಕನಾಗಿ ರಾಯಬರೆಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಲೋಕಸಭೆ ಸ್ಪೀಕರ್ ಚುನಾವಣೆ ನಡೆಯಲಿದ್ದು, ಇದರ ಬೆನ್ನಲ್ಲೇ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಅವರು ಆಯ್ಕೆಯಾಗಿದ್ದಾರೆ.
ನಿನ್ನೆ (ಜೂ.25) ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಇಂಡಿಯಾ ಬ್ಲಾಕ್‌ನ ಸಭೆ ನಡೆಯಿತು. ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ಬಗ್ಗೆ ಚರ್ಚೆ ನಡೆಸಲಾಯಿತು. ಇಂಡಿಯಾ ಬ್ಲಾಕ್ ಸಭೆಯ ನಂತರ ಮಾಹಿತಿ ನೀಡಿದ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಸಂಸದ ಕೆ.ಸಿ. ವೇಣುಗೋಪಾಲ್, ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಸದನದ ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಇನ್ನು ಲೋಕಸಭಾ ವಿಪಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರೇ ಆಗಬೇಕೆಂದು ಕಾಂಗ್ರೆಸ್ ನಾಯಕರು ಈ ಹಿಂದೆ ಆಗ್ರಹಿಸಿದ್ದರು. ಆದರೆ ರಾಹುಲ್ ಗಾಂಧಿ ಅವರು ಇದಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಇದೀಗ ರಾಹುಲ್ ಗಾಂಧಿ ವಿಪಕ್ಷ ನಾಯಕನ ಸ್ಥಾನವನ್ನು ಒಪ್ಪಿಕೊಂಡಿದ್ದಾರೆ. ಮೋದಿ ಮೊದಲ ಅವಧಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಎರಡನೇ ಅವಧಿಯಲ್ಲಿ ಅಧಿರಂಜನ್ ಚೌಧರಿ ಲೋಕಸಭೆಯ ವಿಪಕ್ಷ ನಾಯಕನಾಗಿ ಆಯ್ಕೆ ಆಗಿದ್ದರು. ಇದೀಗ ಮೂರನೇ ಅವಧಿಯಲ್ಲಿ ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ ಆಗಿದ್ದಾರೆ.
Poll (Public Option)

Post a comment
Log in to write reviews