2024-12-24 07:11:21

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮಾನನಷ್ಟ ಮೊಕದ್ದಮೆ ಕೇಸ್: ರಾಹುಲ್ ಗಾಂಧಿಗೆ ಜಾಮೀನು

ಬೆಂಗಳೂರು: ಮಾನನಷ್ಟ ಮೊಕದ್ದಮೆ ಕೇಸ್‌ನಲ್ಲಿ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಾಜಿ ಸಂಸದ ಡಿಕೆ ಸುರೇಶ್ ಅವರು ಶ್ಯೂರಿಟಿ ನೀಡಿದ್ದು, ವಿಚಾರಣೆಯನ್ನು ಜೂನ್ 30ಕ್ಕೆ ಮುಂದೂಡಲಾಗಿದೆ.

ಪ್ರಕರಣದ ಹಿನ್ನೆಲೆ ಏನು..?
2023 ರ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್, ಆಡಳಿತ ಪಕ್ಷವಾಗಿದ್ದ ಬಿಜೆಪಿ ವಿರುದ್ಧ ಲೇವಡಿ ಮಾಡಿತ್ತು. ಅಲ್ಲದೇ ಭ್ರಷ್ಟ ಬಿಜೆಪಿ ಅಂತ ಜಾಹೀರಾತುಗಳನ್ನ ಪೋಸ್ಟ್‌ ಮಾಡಿತ್ತು.ಇದರ ಜೊತೆಗೆ 40 ಪರ್ಸೆಂಟ್ ಕಮಿಷನ್ ಆರೋಪದ ಜಾಹೀರಾತುಗಳನ್ನು ಪ್ರಕಟಿಸಿತ್ತು. ಇದರ ವಿರುದ್ಧ ಬಿಜೆಪಿಯ ಕರ್ನಾಟಕ ಘಟಕ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು. ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಖುದ್ದು ಹಾಜರಾಗುವಂತೆ ನ್ಯಾಯಾಲಯ ಸೂಚಿಸಿತ್ತು.

ಕಾಂಗ್ರೆಸ್‌ನ ಆರೋಪಗಳ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್ ಕೇಶವ ಪ್ರಸಾದ್ ಅವರು 2023 ರ ಮೇ 8 ರಂದು ನ್ಯಾಯಾಲಯಕ್ಕೆ ಸಲ್ಲಿಸಿದ ಖಾಸಗಿ ದೂರಿನ ಆಧಾರದ ಮೇಲೆ ಮಾನನಷ್ಟ ಮೊಕದ್ದಮೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ವಿಶೇಷ ನ್ಯಾಯಾಲಯವು 2024 ರ ಮಾರ್ಚ್ 11 ರಂದು ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿ ಮಾಡಿತ್ತು. ಆರಂಭದಲ್ಲಿ ರಾಹುಲ್ ಗಾಂಧಿ ಅವರು ವಕೀಲರ ಮೂಲಕ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಲೋಕಸಭೆ ಚುನಾವಣೆಯ ಕಾರಣದಿಂದ ಹಾಜರಾಗಲು ಸಾಧ್ಯವಿಲ್ಲ ಮತ್ತು ಜೂನ್‌ನಲ್ಲಿ ವಿಚಾರಣೆಗೆ ಹಾಜರಾಗಲು ಅನುಮತಿ ನೀಡುವಂತೆ ಕೋರಿದ್ದರು. ಅದರಂತೆ ಇವತ್ತು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಕೋರ್ಟ್ ರಾಹುಲ್‌ ಗಾಂಧಿಗೆ ಜಾಮೀನು ಮಂಜೂರು ಮಾಡಿದೆ..

ಜಾಮೀನು ಮಂಜೂರು ಆಗುತ್ತಿದ್ದಂತೆ ಸಂಸದ ರಾಹುಲ್​ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ನೇರವಾಗಿ ಕೆಪಿಸಿಸಿ ಕಚೇರಿಗೆ ತೆರಳಿದರು. ಕಚೇರಿಯಲ್ಲಿ ಕಾಂಗ್ರೆಸ್​ನ ನೂತನ ಸಂಸದರು ಹಾಗೂ ಪರಾಜಿತ ಅಭ್ಯರ್ಥಿಗಳ ಜೊತೆ ರಾಹುಲ್ ಗಾಂಧಿ ಸಂವಾದ ನಡೆಸಿದರು. ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಕೆಜೆ ಜಾರ್ಜ್, ಭೈರತಿ ಸುರೇಶ್, ದಿನೇಶ್ ಗುಂಡೂರಾವ್ ಸೇರಿ ಸಚಿವರು ಹಾಗೂ ಶಾಸಕರು ಭಾಗಿಯಾಗಿದ್ದಾರೆ.


 

Post a comment

No Reviews