
ಬೆಂಗಳೂರು: ಮಾನನಷ್ಟ ಮೊಕದ್ದಮೆ ಕೇಸ್ ವಿಚಾರಣೆಗಾಗಿ ರಾಹುಲ್ ಗಾಂಧಿ ನಾಳೆ ಬೆಂಗಳೂರಿಗೆ ಬರುವ ಸಾಧ್ಯತೆ ಇದೆ. ಈ ಪ್ರಕರಣದ ಸಂಬಂಧ ಜೂನ್ 1ರಂದು ರಾಹುಲ್ ಗಾಂಧಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಹಾಜರಾಗಬೇಕಿತ್ತು.. ಲೋಕಸಭೆ ಚುನಾವಣೆಯ ಕಾರಣದಿಂದ ಹಾಜರಾಗಲು ಸಾಧ್ಯವಿಲ್ಲ ಮತ್ತು ಜೂನ್‌ನಲ್ಲಿ ವಿಚಾರಣೆಗೆ ಹಾಜರಾಗಲು ಅನುಮತಿ ನೀಡುವಂತೆ ಕೋರಿದ್ದರು. ಆದ್ರೆ ಜೂನ್ 1 ರಂದು ಕೂಡ ರಾಹುಲ್ ಕೋರ್ಟ್‌ಗೆ ಹಾಜರಾಗಿರಲಿಲ್ಲ.. ಹೀಗಾಗಿ ವಿಚಾರಣೆಯನ್ನು ಜೂನ್ 7ಕ್ಕೆ ಅಂದ್ರೆ ನಾಳೆಗೆ ನಿಗದಿಪಡಿಸಲಾಗಿದೆ. ಕೋರ್ಟ್ ವಿಚಾರಣೆ ಸಂಬಂಧ ರಾಹುಲ್ ಗಾಂಧಿ ಬೆಂಗಳೂರಿಗೆ ಬರುವ ನಿರೀಕ್ಷೆ ಇದೆ.. ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿವಕುಮಾರ್‌ಗೆ ಜೂನ್ 1ರಂದು ಜಾಮೀನು ಮಂಜೂರು ಮಾಡಿದ್ದ ವಿಶೇಷ ನ್ಯಾಯಾಲಯ, ಜೂನ್ 7 ರಂದು ರಾಹುಲ್ ಗಾಂಧಿಯನ್ನು ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿತ್ತು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾಗಿದ್ದಾರೆ.
ಪ್ರಕರಣದ ಹಿನ್ನೆಲೆ ಏನು..?
2023 ರ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್, ಆಡಳಿತ ಪಕ್ಷವಾಗಿದ್ದ ಬಿಜೆಪಿ ವಿರುದ್ಧ ಲೇವಡಿ ಮಾಡಿತ್ತು.. ಅಲ್ಲದೇ ಭ್ರಷ್ಟ ಬಿಜೆಪಿ ಅಂತ ಜಾಹೀರಾತುಗಳನ್ನ ಪೋಸ್ಟ್ ಮಾಡಿತ್ತು.. ಇದರ ಜೊತೆಗೆ 40 ಪರ್ಸೆಂಟ್ ಕಮಿಷನ್ ಆರೋಪದ ಜಾಹೀರಾತುಗಳನ್ನು ಪ್ರಕಟಿಸಿತ್ತು. ಇದರ ವಿರುದ್ಧ ಬಿಜೆಪಿಯ ಕರ್ನಾಟಕ ಘಟಕ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು. ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಖುದ್ದು ಹಾಜರಾಗುವಂತೆ ನ್ಯಾಯಾಲಯ ಸೂಚಿಸಿತ್ತು.
ಕಾಂಗ್ರೆಸ್‌ನ ಆರೋಪಗಳ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್ ಕೇಶವ ಪ್ರಸಾದ್ ಅವರು 2023 ರ ಮೇ 8 ರಂದು ನ್ಯಾಯಾಲಯಕ್ಕೆ ಸಲ್ಲಿಸಿದ ಖಾಸಗಿ ದೂರಿನ ಆಧಾರದ ಮೇಲೆ ಮಾನನಷ್ಟ ಮೊಕದ್ದಮೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ವಿಶೇಷ ನ್ಯಾಯಾಲಯವು 2024 ರ ಮಾರ್ಚ್ 11 ರಂದು ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿ ಮಾಡಿತ್ತು. ಆರಂಭದಲ್ಲಿ ರಾಹುಲ್ ಗಾಂಧಿ ಅವರು ವಕೀಲರ ಮೂಲಕ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಲೋಕಸಭೆ ಚುನಾವಣೆಯ ಕಾರಣದಿಂದ ಹಾಜರಾಗಲು ಸಾಧ್ಯವಿಲ್ಲ ಮತ್ತು ಜೂನ್‌ನಲ್ಲಿ ವಿಚಾರಣೆಗೆ ಹಾಜರಾಗಲು ಅನುಮತಿ ನೀಡುವಂತೆ ಕೋರಿದ್ದರು.
Poll (Public Option)

Post a comment
Log in to write reviews