2024-12-24 06:56:26

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕರಾವಳಿ ಭಾಗಗಳಲ್ಲಿ ಮತ್ತೆ ಮಳೆ ಆರ್ಭಟ: ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ನಿರಂತರವಾಗಿ ಬಿಡದೇ ಸುರಿಯುತ್ತಿದ್ದ ಮಳೆರಾಯ ಕಳೆದ ಮೂರ್ನಾಲ್ಕು ದಿನಗಳಿಂದ ತನ್ನ ಅಬ್ಬರವನ್ನು ಕಡಿಮೆಮಾಡಿದ್ದ. ಆದರೆ, ಇದೀಗ ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಅಲರ್ಟ್ ಘೋಷಿಸಿದೆ.

ಕರಾವಳಿಯ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮೂರು ದಿನಗಳ ಕಾಲ ಕರ್ವಾವಳಿ ಭಾಗಗಳಲ್ಲಿ ಮುಂಗಾರು ಚುರುಕಾಗಲಿದ್ದು, ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೀದರ್, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯನಗರರ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾದಾರಣ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ತುಮಕೂರು, ಕೋಲಾರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

Post a comment

No Reviews