2024-12-24 07:07:50

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಾಜ್ಯಾದ್ಯಂತ ಮಳೆಯ ಎಚ್ಚರಿಕೆ !

ಬೆಂಗಳೂರು: ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಮಧ್ಯಮ ಮಳೆಯೊಂದಿಗೆ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ  ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಚಾಮರಾಜನಗರ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವವಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದೆ.

ಗುಡುಗು ಸಹಿತ ಮಳೆ !

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲೂ ಸಾಧಾರಣ ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

Post a comment

No Reviews