
ಬೆಂಗಳೂರು : 15 ದಿನಗಳ ಕಾಲ ಮಳೆಯಾದ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಸಾಕಷ್ಟು ಹಾನಿಯಾಗಿದೆ. ಮೇ 22ರಂದು ಸಿಎಂ ಮತ್ತು ಡಿಸಿಎಂ ನಗರ ಪ್ರವಾಸ ಕೈಗೊಂಡಿದ್ದರು. ಈ ವೇಳೆ ಒಣ ಮರಗಳನ್ನು ನೋಡಿ ಸಿಎಂ ಸಿದ್ದರಾಮಯ್ಯ ಕೋಪಗೊಂಡಿದ್ದಾರೆ.
ಒಣಗಿದ ಮರಗಳನ್ನು ಯಾಕೆ ಬಿಟ್ಟಿದ್ದೀರಿ? ಅನಾಹುತ ಆಗಲಿ ಅಂತಾನಾ? ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು . ಶೀಘ್ರ ತೆರವುಗೊಳಿಸುವಂತೆ ಸೂಚಿಸಿದರು.
ಬನಶಂಕರಿ 2ನೇ ಹಂತದ 100 ಫೀಟ್ ರಸ್ತೆಯ ಒಣಗಿದ ಮರಗಳನ್ನು ತೆರವುಗೊಳಿಸಬೇಕು. ನಗರದಾದ್ಯಂತ ಇರುವ ಒಣಮರ, ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು ಎಂದರು.
ನಗರ ಸೌಂದರ್ಯಕ್ಕೆ ಹೆಚ್ಚು ಒತ್ತು ಕೊಡಬೇಕು, ಪದ್ಮನಾಭನಗರ ಫ್ಲೈ ಓವರ್ ಬಳಿ ಹಾನಿಯಾಗಿರುವ ಫುಟ್ ಪಾತ್ ಶೀಘ್ರವಾಗಿ ದುರಸ್ತಿಗೊಳಿಸಿ, ಮೆಟ್ರೋ ಮತ್ತು ಫ್ಲೈ ಓವರ್ ಕಾಮಗಾರಿಯಿಂದಾಗಿ ಅಲ್ಲಲ್ಲಿ ಹಾಕಲಾಗಿದ್ದ ಡೆಬ್ರಿಸ್ ಗಳನ್ನು ಆಗಿಂದಾಗಲೇ ತೆರವುಗೊಳಿಸಲು ಸಿಎಂ ಸೂಚನೆ ನೀಡಿದರು.
Poll (Public Option)

Post a comment
Log in to write reviews