
ಬೆಂಗಳೂರು: ನಗರದಲ್ಲಿ ಮಳೆಯಿಂದ ಭಾರೀ ಅವಾಂತರ ಸೃಷ್ಟಿಯಾಗಿದೆ. ಎಷ್ಟರ ಮಟ್ಟಿಗೆ ಎಂದರೆ ಬೆಂಗಳೂರಿನ ಹೊರವಲಯ, ಮಹದೇವಪುರ ಹಾಗೂ ಕೆ.ಆರ್ ಪುರ ಸೇರಿದಂತೆ ವಿವಿಧ ಭಾಗದಲ್ಲಿ ರಸ್ತೆಗಳಲ್ಲಿ ಇನ್ನೂ ನೀರು ನಿಂತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ರಸ್ತೆಗಳಲ್ಲಿ ಮಂಡಿಯವರೆಗೆ ನೀರು ನಿಲ್ಲುತ್ತಿದ್ದು, ಜನ ಹೈರಾಣಾಗಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ರಾತ್ರಿ ಧಾರಾಕಾರ ಮಳೆಯಾಗಿದೆ. ಕೆಲವು ಕಡೆ ಸಾಧಾರಣ ಮಳೆಯಾಗಿದ್ದರೂ, ಭಾರೀ ಪ್ರಮಾಣದಲ್ಲಿ ಅನಾಹುತ ಸಂಭವಿಸಿದೆ. ಮಹದೇವಪುರದಲ್ಲಿ ಹಲವು ರಸ್ತೆಗಳು ಜಲಾವೃತವಾಗಿದ್ದು, ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಮುಖ ರಸ್ತೆಗಳಲ್ಲಿ ನೀರು ನಿಂತಿದ್ದು ವಾಹನ ಸವಾರರು ರಸ್ತೆಗಳಲ್ಲಿ ಬೀಳುತ್ತಿದ್ದಾರೆ. ಇದೀಗ ಮಹದೇವಪುರದ ಬಳಗೆರೆಯಿಂದ ಕುಂದಲಹಳ್ಳಿ ರಸ್ತೆ ಸಂಪೂರ್ಣ ಕೆರೆಯಂತೆ ಬದಲಾಗಿದ್ದು, ಜನ ಪರದಾಡುತ್ತಿದ್ದಾರೆ. ಮಳೆ ಹಾಗೂ ಚರಂಡಿ ನೀರು ನಿಂತಿದ್ದು, ಸಾರ್ವಜನಿಕರು ಹೈರಾಣಾಗಿದ್ದಾರೆ. ರಸ್ತೆ ಪೂರ್ತಿ ಗುಂಡಿಮಯವಾಗಿದೆ. ನೀರಿನಲ್ಲಿ ಹೋಗಲಾಗದೆ ವಾಹನ ಸವಾರರು ಜಾರಿ ಬೀಳುತ್ತಿದ್ದಾರೆ.
Poll (Public Option)

Post a comment
Log in to write reviews