
ನಾನು ಹೇಳಿದಂತೆ ಕಾರ್ಪೊರೇಷನ್ ಅಧಿಕಾರಿಗಳು, ಹಗಲು-ರಾತ್ರಿಯೆನ್ನದೆ ಕೆಲಸ ಮಾಡುತ್ತಿದ್ದಾರೆ. ಆದರೆ, ರಾಜಧಾನಿಯಲ್ಲಿ ಇನ್ನೂ ಎಷ್ಟು ರಸ್ತೆಗಳು ಗುಂಡಿ ಬಿದ್ದಿವೆ ಎಂಬ ಲೆಕ್ಕ ನನ್ನ ಹತ್ತಿರ ಇದೆ. ಯಾವ ಅಧಿಕಾರಿಗಳು ಯಾವ ರೀತಿ ಕೆಲಸ ಮಾಡಿದ್ದಾರೆ ಎಂದು ತಿಳಿಯಲು ಮತ್ತೆ ಸಿಟಿ ರೌಂಡ್ಸ್ ಮಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
ರಸ್ತೆ ಗುಂಡಿ ಕಾಮಗಾರಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ನನ್ನ ದೊಡ್ಡ ಸಾಧನೆ ಎಂದು ನಾನು ಹೇಳಿಕೊಳ್ಳುವುದಿಲ್ಲ. ನನ್ನ ಕೈಲಾದ ಪ್ರಯತ್ನವನ್ನು ನಾನು ಮಾಡಿದ್ದೇನೆ. ಅಧಿಕಾರಿಗಳಿಗೆ ಸರಿಯಾಗಿ ಕೆಲಸ ಮಾಡಲು ಹೇಳಿದ್ದೇನೆ. ಅವರು ಯಾವ ರೀತಿ ಗುಣಮಟ್ಟದ ಕೆಲಸ ಮಾಡಿದ್ದಾರೆ ಎಂದು ತಿಳಿಯಲು ನಾನೇ ಖುದ್ದಾಗಿ ಸ್ಥಳಕ್ಕೆ ಹೋಗುತ್ತೇನೆ. ಆಗ ನಿಮ್ಮನ್ನು ಕರೆಯುತ್ತೇನೆ ಎಂದು ತಿಳಿಸಿದರು.
Poll (Public Option)

Post a comment
Log in to write reviews