
ಬೆಂಗಳೂರು:ಬ್ಯಾಚುಲರ್ಸ್ ಪಾರ್ಟಿ ಸಿನಿಮಾದಲ್ಲಿ 'ನ್ಯಾಯ ಎಲ್ಲಿದೆ' ಎಂಬ ಹಾಡನ್ನು ಅನಧಿಕೃತವಾಗಿ ಬಳಸಿ ಕಾಪಿ ರೈಟ್ಸ್ ಉಲ್ಲಂಘನೆ ಮಾಡಿದ ಆರೋಪದಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಬಂಧನ ಭೀತಿ ಎದುರಿಸುತ್ತಿರುವ ರಕ್ಷಿತ್ ಶೆಟ್ಟಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ರಕ್ಷಿತ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಲಾಗಿದ್ದು, ವಿಚಾರಣೆಯನ್ನು ಜುಲೈ 24 ಕ್ಕೆ ಸೆಷನ್ಸ್ ಕೋರ್ಟ್ ಮುಂದೂಡಿದೆ.
Poll (Public Option)

Post a comment
Log in to write reviews