
ಬೆಂಗಳೂರು : ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ರಾಜರಾಜೇಶ್ವರಿ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಶಾಕ್ ನೀಡಿದ್ದು, ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮಂಗಳವಾರಕ್ಕೆ (ಅ.8) ಮುಂದೂಡಿಕೆ ಕೋರ್ಟ್ ಆದೇಶಿಸಿದೆ.
ಇನ್ನೂ ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿರುವ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ವಿಶೇಷ ನ್ಯಾಯಧೀಶರಾದ ಸಂತೋಷ್ ಗಜಾನನ ಭಟ್ ಅವರು ಅರ್ಜಿ ವಿಚಾರಣೆಯನ್ನು ಮುಂದೂಡಿ ಆದೇಶವನ್ನು ನೀಡಿದ್ದಾರೆ. ಇನ್ನೂ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯೋರ್ವರು ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್ ದಾಖಲಿಸಿದ್ದರು. ತದನಂತರದಲ್ಲಿ ಮುನಿರತ್ನ ವಿರುದ್ಧದ ಪ್ರಕರಣಗಳನ್ನು ರಾಜ್ಯ ಸರ್ಕಾರವು ವಿಶೇಷ ತನಿಖಾ ದಳಕ್ಕೆ ತನಿಖೆಗೆ ವಹಿಸಿ ಆದೇಶ ನೀಡಿತ್ತು. ಇನ್ನು ಮುನಿರತ್ನ ಬಿಬಿಎಂಪಿ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿರುವ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣವನ್ನು ಎದುರಿಸುತ್ತಿದ್ದಾರೆ.
Poll (Public Option)

Post a comment
Log in to write reviews