
ಬೆಂಗಳೂರು: ಅತ್ಯಾಚಾರ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನುಗಾಗಿ ಹೈ ಕೋರ್ಟ್ ಮೆಟ್ಟಿಲೇರಿದ್ದ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹಿನ್ನೆಡೆಯಾಗಿದೆ. ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು (ಅಕ್ಟೋಬರ್ 21) ಕರ್ನಾಟಕ ಹೈ ಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ. ಒಂದಲ್ಲ ಎರಡಲ್ಲ ನಾಲ್ಕು ಕೇಸ್‌ಗಳ ಪೈಕಿ ಮೂರೂ ಪ್ರಕರಣಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಎರಡು ಅತ್ಯಾಚಾರ, ಒಂದು ಮಹಿಳೆ ಅಶ್ಲೀಲ ದೃಶ್ಯ ಸೆರೆಹಿಡಿದ ಪ್ರಕರಣದ ಜಾಮೀನು ಅರ್ಜಿ ವಜಾಗೊಂಡಿದ್ದು, ಇನ್ನೊಂದು ಅತ್ಯಾಚಾರ ಪ್ರಕರಣದ ಆದೇಶ ಪ್ರಕಟಿಸುವುದು ಬಾಕಿಯಿದೆ.
ಪ್ರಜ್ವಲ್ ವಿರುದ್ಧ ಮೂರು ಅತ್ಯಾಚಾರ ಮತ್ತು ಒಂದು ಲೈಂಗಿಕ ದೌರ್ಜನ್ಯ, ಮಹಿಳೆಯ ಘನತೆಗೆ ಧಕ್ಕೆ ಉಂಟು ಮಾಡಿದ ಆರೋಪದ ಸಂಬಂಧ ಪ್ರತ್ಯೇಕವಾಗಿ ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ. ಈ ಪೈಕಿ ಮೂರು ಪ್ರಕರಣಗಳಲ್ಲಿ ಪ್ರಜ್ವಲ್ ಜಾಮೀನು ಕೋರಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಇಂದು ವಜಾ ಮಾಡಿದೆ.
ಇನ್ನು ಪ್ರಜ್ವಲ್ ರೇವಣ್ಣ ಪರವಾಗಿ ವಕೀಲ ಜಿ ಅರುಣ್ ವಕಾಲತ್ತು ಹಾಕಿದ್ದು, ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದ್ದಾರೆ. ರಾಜ್ಯ ಸರ್ಕಾರದ ವಿಶೇಷ ತನಿಖಾ ದಳದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್ ಅವರು ಪ್ರತಿವಾದ ಮಂಡಿಸಿದ್ದಾರೆ.
Poll (Public Option)

Post a comment
Log in to write reviews