ರಶ್ಮಿಕಾ ಮಂದಣ್ಣ ಅವರು ಪುಷ್ಪ ಮತ್ತು ನಿಮಲ್ ಸಿನಿಮಾಗಳ ಮೂಲಕ ಬಹುಬೇಡಿಕೆಯ ನಟಿಯಾಗಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇವರು ಹಿಂದೆ ಡೀಪ್ ಫೇಕ್ ವಿಡಿಯೋ ದಿಂದ ಸಮಸ್ಯೆ ಎದುರಿಸುತ್ತಿದ್ದರು. ರಶ್ಮಿಕಾ ಈ ನಡುವೆ ನಟಿ ಬಿಗ್ ಅಪ್ಡೇಟ್ವೊಂದನ್ನು ನೀಡಿದ್ದಾರೆ. ರಶ್ಮಿಕಾ ಮಂದಣ್ಣ ಈಗ ಸೈಬರ್ ಕ್ರೈಂ ರಾಷ್ಟ್ರೀಯ ರಾಯಭಾರಿ ನೇಮಕ ಆಗಿದ್ದಾರೆ. ಈ ಕುರಿತು ನಟಿ ರಶ್ಮಿಕಾ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.
ಸೈಬರ್ ಅಪರಾಧವು ಅಪಾಯಕಾರಿ ಮತ್ತು ವ್ಯಾಪಕವಾದ ಸಮಸ್ಯೆಯಾಗಿದೆ. ಪ್ರಪಂಚದಾದ್ಯಂತ ಇರುವ ವ್ಯಕ್ತಿಗಳು ವ್ಯವಹಾರಗಳು ಮತ್ತು ಸಮುದಾಯಗಳ ಮೇಲೆ ಪರಿಣಾಮ ಬೀರುತ್ತದೆ. ಸೈಬರ್ ಸಮಸ್ಯೆಯನ್ನು ಅನುಭವಿಸಿರುವ ವ್ಯಕ್ತಿಯಾಗಿ, ಈ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಧನಾತ್ಮಕ ಬದಲಾವಣೆಯನ್ನು ತರಲು ಸೈಬರ್ ಸುರಕ್ಷತೆಯ ಸಂದೇಶವನ್ನು ಪ್ರಚಾರ ಮಾಡಲು ನಾನು ಉತ್ಸುಕಗಳಾಗಿದ್ದೇನೆ. ಈ ಕರ‍್ಯದಲ್ಲಿ ನಾನು ಸಕ್ರಿಯವಾಗಿ ತೊಡಗಿಕೊಳ್ಳಲಿದ್ದೇನೆ. ಎಲ್ಲರೂ ಒಟ್ಟಾಗಿ ಭಾರತವನ್ನು ಸೈಬರ್ ಅಪರಾಧಗಳಿಂದ ಮುಕ್ತಗೊಳಿಸೋಣ ಎಂದು ನಟಿ ರಶ್ಮಿಕಾ ಅವರು ವಿಡಿಯೋದಲ್ಲಿ ತಿಳಿಸಿದ್ದಾರೆ.
ರಶ್ಮಿಕಾ ಅಪಾಯಕಾರಿ ಸೈಬರ್ ಕ್ರೈಂ, ಡೀಪ್ ಫೇಕ್ ವಿಡಿಯೋ, ಆನ್ ಲೈನ್ ಫ್ರಾಡ್ ಇನ್ನಿತರೆ ಸೈಬರ್ ಸಂಬಂಧಿ ಅಪರಾಧಗಳ ಕುರಿತಾಗಿ ಸಾಕ್ಷರತೆ, ಜಾಗೃತೆ ಮೂಡಿಸುವ ಕರ‍್ಯವನ್ನು ಮಾಡಲಿದ್ದಾರೆ.
Post a comment
Log in to write reviews