
ಮುಂಬೈ: ಅನಾರೋಗ್ಯದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಟಾಟಾ ಸನ್ಸ್‌ನ ಎಮೆರಿಟಸ್ ಅಧ್ಯಕ್ಷ ರತನ್ ನೇವಲ್ ಟಾಟಾ ಬುಧುವಾರ ನಿಧನರಾಗಿದ್ದಾರೆ.
(86) ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವಿಷಯ ದೇಶಾದ್ಯಂತ ತೀವ್ರ ಸುದ್ದಿಗೆ ಗ್ರಾಸವಾಗಿತ್ತು.
ಅಕ್ಟೋಬರ್ 7 ರಂದು ಟ್ವೀಟ್ ಮಾಡಿದ್ದ ಅವರು 'ಯಾವುದೇ ಆತಂಕಕ್ಕೆ ಕಾರಣವಿಲ್ಲ' ಎಂದು ಭರವಸೆ ಕೂಡಾ ನೀಡಿದ್ದರು. ಅವರ ವಯಸ್ಸು ಮತ್ತು ವೈದ್ಯಕೀಯ ಸಂಬಂಧಿತ ಪರಿಸ್ಥಿತಿಗಳಿಂದಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗುತ್ತಿದ್ದೇನೆ ಎಂದು ಅವರು ಹೇಳಿಕೆಯಲ್ಲಿ ಬಹಿರಂಗಪಡಿಸಿದ್ದರು. ಆದರೀಗ, ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಿದ್ರೂ ಫಲಿಸದೆ ನಿಧನರಾಗಿದ್ದಾರೆ.
Poll (Public Option)

Post a comment
Log in to write reviews