
ಬೆಂಗಳೂರು ಮೇ 24- ಕಳೆದ ಐದು ದಿನಗಳ ಹಿಂದೆ ಫಾರ್ಮ್ ಹೌಸ್‌ನಲ್ಲಿ ನಡೆದಿದ್ದ ರೇವ್ ಪಾರ್ಟಿಗೆ ಸಂಬಂಧಪಟ್ಟಂತೆ ಹೆಬ್ಬಗೋಡಿ ಪೊಲೀಸ್ ಠಾಣೆಯ ಎಸ್‌ಐ ಸೇರಿ ಮೂವರು ಪೊಲೀಸರನ್ನು ಅಮಾನತು ಮಾಡಿ ಎಂದು ಆದೇಶಿಸಲಾಗಿದೆ.
ರೇವ್ ಪಾರ್ಟಿ ಬಗ್ಗೆ ಮಾಹಿತಿ ಕಲೆ ಹಾಕಲು ವಿಫಲವಾಗಿರುವ ಆರೋಪದ ಮೇಲೆ ಠಾಣೆಯ ಎಸ್.ಬಿ. ಗಿರೀಶ್, ಎಸ್‌ಐ ನಾರಾಯಣ ಸ್ವಾಮಿ, ಗಸ್ತು ಸಿಬ್ಬಂದಿ ದೇವರಾಜು ಸೇರಿ ಮೂವರನ್ನು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ್ ಬಾಲದಂಡಿ ಅವರು ಅಮಾನತು ಮಾಡಲು ಆದೇಶ ಹೊರಡಿಸಿದ್ದಾರೆ.
ಇದೇ ವೇಳೆ ಡಿವೈಎಸ್ಪಿ ಹಾಗೂ ಇನ್ಸ್‌ಪೆಕ್ಟರ್‌ಗಳಿಗೆ ಜಿಲ್ಲಾ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಚಾರ್ಜ್ ಮೆಮೋ ನೀಡಿದ್ದಾರೆ. ಅಲ್ಲದೆ, ಪ್ರಕರಣ ನಿಮ್ಮ ಗಮನಕ್ಕೆ ಯಾಕೆ ಬಂದಿಲ್ಲ? ಇದಕ್ಕೆ ಕಾರಣ ನೀಡಿ ಎಂದು ವಿವರಣೆ ಕೇಳಿದ್ದಾರೆ. ಡಿವೈಎಸ್ಪಿ ಹಾಗೂ ಇನ್ಸ್‌ಪೆಕ್ಟರ್ ಅವರ ಉತ್ತರ ಆಧರಿಸಿ ಅವರ ಮೇಲೂ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಸಿಸಿಬಿ ಪೊಲೀಸರಿಗೆ ಸಿಕ್ಕ ಮಾಹಿತಿ ಸ್ಥಳೀಯ ಪೊಲೀಸರಿಗೆ ಯಾಕೆ ಸಿಕ್ಕಿಲ್ಲ ಎಂದು ಪ್ರಶ್ನೆ ಮಾಡಲಾಗಿದ್ದು, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
Poll (Public Option)

Post a comment
Log in to write reviews