
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಆರ್ಭಟ ಮುಂದುವರೆಯಲಿದ್ದು ಕರಾವಳಿಯ 3 ಜಿಲ್ಲೆಗಳು ಸೇರಿ ರಾಜ್ಯದ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸೆದೆ.
ಹವಾಮಾನ ಮುನ್ಸೂಚನೆಯಂತೆ ಜೂನ್ 27ರ ವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು ಜೂನ್ 24ರಂದು ರೆಡ್ ಅಲರ್ಟ್ ಘೋಷಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಾದ ಬೆಳಗಾವಿ, ದಾವಣಗೆರೆ, ಹಾವೇರಿ, ಧಾರವಾಡ, ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನು ಬಾಗಲಕೋಟೆ, ಗದಗ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಪೂರ್ವ ಅರಬ್ಬಿ ಸಮುದ್ರದ ಕರ್ನಾಟಕದ ಕರಾವಳಿಯಲ್ಲಿ ಸಮುದ್ರ ಮಟ್ಟದಲ್ಲಿ ಟ್ರಫ್ ಇರುವುದರಿಂದ, ಪಶ್ಚಿಮ ದಿಕ್ಕಿನಿಂದ ಬಲವಾದ ಗಾಳಿ ಬೀಸುವುದ ರಿಂದ ಕರ್ನಾಟಕದ ಕರಾವಳಿ ಜಿಲ್ಲೆ ಗಳಲ್ಲಿ ಜೂ.24 ರಿಂದ 27ರ ವರೆಗೆ ವ್ಯಾಪಕ ಮಳೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಜತೆಗೆ ಗಾಳಿಯ ವೇಗ ಸಹ ಪ್ರತಿ ಗಂಟೆಗೆ 50 ಕಿ.ಮೀ ಇರುವ ಹೆಚ್ಚಿನ ಸಾಧ್ಯತೆಗಳಿವೆ
Poll (Public Option)

Post a comment
Log in to write reviews