ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪ್ರದೂಷ್ ಮತ್ತು ಜಗದೀಶ್ ಸಲ್ಲಿಸಿರುವ ಜಾಮೀನು ಅರ್ಜಿ ಇಂದು ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. 57 ನೇ ಸಿಸಿಎಚ್ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಲಿದ್ದು, ಎ6 ಆರೋಪಿ ಜಗದೀಶ್ ಪರವಾಗಿ ರಂಗನಾಥ್ ರೆಡ್ಡಿ ವಾದ ಮಾಡಲಿದ್ದರೆ, ಎ 14 ಆರೋಪಿ ಪ್ರದೂಷ್ ಪರವಾಗಿ ವಕೀಲ ಪರಶುರಾಮ್ ವಾದಿಸಲಿದ್ದಾರೆ. ದರ್ಶನ್ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳಿಸಿದ್ದಾನೆಂಬ ಆರೋಪದ ಮೇಲೆ ರೇಣುಕಾಸ್ವಾಮಿಯನ್ನು ದರ್ಶನ್ ಮತ್ತು ಗ್ಯಾಂಗ್ ಕ್ರೂರವಾಗಿ ಚಿತ್ರಹಿಂಸೆ ನೀಡಿ ಕೊಂದಿರುವ ಆರೋಪ ಎದುರಿಸುತ್ತಿದೆ.
Post a comment
Log in to write reviews