ಈ ಹಿಂದೆ ಕೆಲವು ಬಾರಿ ಅರ್ಜಿ ವಿಚಾರಣೆ ವಿವಿಧ ಕಾರಣಗಳಿಗೆ ಮುಂದೂಡಲಾಗಿತ್ತು. ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಇಂದು ದರ್ಶನ್ ಪರ ಹಿರಿಯ ವಕೀಲ ಸಿಎನ್ ನಾಗೇಶ್ ಅವರು ವಾದ ಮಂಡಿಸಿದರು. ಕಳೆದ ಎರಡು ವಾರದಿಂದಲೂ ದರ್ಶನ್ಗೆ ಜಾಮೀನು ಅರ್ಜಿ ಮುಂದೂಡಿಕೆ ಆಗುತ್ತಲೇ ಬಂದಿದ್ದು, ಇಂದು ಕೊನೆಗೂ ಸಿವಿ ನಾಗೇಶ್ ಅವರು ದರ್ಶನ್ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದರು
ಹಿರಿಯ ವಕೀಲ ಸಿವಿ ನಾಗೇಶ್ರವರು ಎಸ್ಪಿಪಿ ಪ್ರಸನ್ನ ಕುಮಾರ್ ಹಾಜರಿಯಲ್ಲಿ ವಾದ ಮಂಡನೆ ಆರಂಭಿಸಿ, ಪ್ರಕರಣದಲ್ಲಿ ಮಾಧ್ಯಮಗಳು ದರ್ಶನ್ ಅನ್ನು ಅಪರಾಧಿ ಎಂದೇ ಬಿಂಬಿಸಿವೆ ಎಂದು ಟೀಕೆ ವ್ಯಕ್ತಪಡಿಸಿದ್ದಾರೆ. ನಾಗೇಶ್ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ವಾದದ ಟಿಪ್ಪಣಿ ಸಲ್ಲಿಸಿ ಆ ಬಳಿಕ ಎರಡು ಸುಪ್ರೀಂ ಕೋರ್ಟ್ನ ಆದೇಶಗಳನ್ನು ಸಹ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದರು.
ಆರಂಭದಲ್ಲಿ ದರ್ಶನ್ ವಿರುದ್ಧ ಮಾಧ್ಯಮಗಳ ವಿಚಾರ, ಸಾಮಾಜಿಕ ಜಾಲತಾಣಗಳಲ್ಲಿ ಮಾಡಲಾದ ಆರೋಪಗಳ ಬಗ್ಗೆ ನ್ಯಾಯಾಲಯದ ಗಮನ ಸೆಳೆದ ವಕೀಲರು, ಮಾಧ್ಯಮಗಳ ವರದಿ ಆಧಾರದಲ್ಲಿ ತೀರ್ಪು ನೀಡಬಾರದೆಂದು ಮನವಿ ಮಾಡಿದರು.
ಸಿವಿ ನಾಗೇಶ್ ಅವರ ಸುದೀರ್ಘ ವಾದವನ್ನು ಆಲಿಸಿದ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ನಾಳೆ (ಅಕ್ಟೋಬರ್ 05) ಮಧ್ಯಾಹ್ನ 12:30ಕ್ಕೆ ಮುಂದೂಡಿಕೆ ಮಾಡಿದರು. ನಾಳೆಯೂ ಸಹ ಸಿವಿ ನಾಗೇಶ್ ಅವರ ವಾದ ಮುಂದುವರೆಯಲಿದ್ದು, ಅದಾದ ಬಳಿಕ ಪ್ರಸನ್ನ ಅವರ ಆಕ್ಷೇಪಣೆ ಸಹ ಇರುವ ಸಾಧ್ಯತೆ ಇದೆ. ಆ ಬಳಿಕ ನ್ಯಾಯಾಧೀಶರು ಜಾಮೀನು ಅರ್ಜಿ ಕುರಿತಂತೆ ತೀರ್ಪು ನೀಡಲಿದ್ದಾರೆ.
Post a comment
Log in to write reviews