
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನಕ್ಕೆ ಸಂಬಂಧಿಸಿದಂತೆ ನಟಿ, ರಾಜಕಾರಣಿ ರಮ್ಯಾ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘ ಪೋಸ್ಟ್ ಹಾಕಿರುವ ರಮ್ಯಾ, ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಯಾರೂ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಬಾರದು. ಯಾವುದೇ ಕಾರಣಕ್ಕೂ ನೀವು ಜನರನ್ನು ಹೊಡೆಯಲು ಅಥವಾ ಕೊಲ್ಲಲು ಮುಂದಾಗಬೇಡಿ. ನ್ಯಾಯ ಸಿಗುತ್ತೆ ಅಥವಾ ಇಲ್ಲವೇ ಎಂಬ ಬಗ್ಗೆ ನಿಮಗೆ ಗೊಂದಲವಿದ್ದರೂ ಕೂಡ ಒಂದು ದೂರು ನೀಡಿದರೆ ಸಾಕು ಎಂದಿದ್ದಾರೆ.
ಜೊತೆಗೆ ಕರ್ನಾಟಕ ಪೊಲೀಸ್ ಅಧಿಕಾರಿಗಳ ಪ್ರಯತ್ನವನ್ನೂ ಪ್ರಶಂಸಿದ್ದಾರೆ. ಇದು ಕೃತಜ್ಞತೆಯಿಲ್ಲದ ಕೆಲಸ ಪೊಲೀಸರು ತಮ್ಮ ಕೆಲಸವನ್ನು ಅತ್ಯುತ್ತಮವಾಗಿ ಮಾಡುತ್ತಿದ್ದಾರೆ. ಅವರು ರಾಜಕೀಯ ಪಕ್ಷಗಳ ಒತ್ತಡಕ್ಕೆ ಮಣಿಯುವುದಿಲ್ಲ ಮತ್ತು ಕಾನೂನು ಮತ್ತು ನ್ಯಾಯದಲ್ಲಿ ಜನರು ನಂಬಿಕೆ ಇಡುವಂತೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
Poll (Public Option)

Post a comment
Log in to write reviews