ರೇಣುಕಾಸ್ವಾಮಿ ಕೊಲೆ ಕೇಸ್ -ದಾಸನಿಗೆ ಜೈಲೇ ಗತಿ!
ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದ A2 ಆರೋಪಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಇಂದು ನಡೆಸಿದ್ದು ಅಕ್ಟೋಬರ್ 4ಕ್ಕೆ ಮುಂದೂಡಿ ಎಂದು ಆದೇಶಿಸಿದೆ. ಸದ್ಯ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ನ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿರುವ 57ನೇ ಸಿಸಿಎಚ್ ಈ ಆದೇಶವನ್ನು ನೀಡಿದೆ. ಇಂದು ಇನ್ನು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ದರ್ಶನ್ಗೆ ಮತ್ತೆ ಶಾಕ್ ಆಗಿದೆ.
ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಜೈ.ಶಂಕರ್ ಅವರು ಎಸ್ಪಿಪಿಗೆ ಆಕ್ಷೇಪಣೆ ಸಲ್ಲಿಸುವ ನೋಟಿಸ್ ನೀಡಿ ಮುಂದಿನ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿತ್ತು. ಹತ್ಯೆ ಕೇಸ್ನಲ್ಲಿ ದರ್ಶನ್ ಜೈಲು ಸೇರಿ 100 ದಿನಗಳ ನಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇನ್ನು ದರ್ಶನ್ ಪರ ಹಿರಿಯ ವಕೀಲರಾದ ಸಿ.ವಿ.ನಾಗೇಶ್ ಅವರು ವಾದ ಮಂಡಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಬೇಲ್ ಅರ್ಜಿ ವಿಚಾರಣೆ ಕೋರ್ಟ್ ಮುಂದೂಡಿದೆ.
Post a comment
Log in to write reviews