
ಚಿತ್ರದುರ್ಗ: ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ 17 ಮಂದಿ ಅರೆಸ್ಟ್ ಆಗಿದ್ದು, ಈ ಪೈಕಿ ಮೂವರಿಗೆ ಜಾಮೀನು ಸಿಕ್ಕಿದೆ. ಉಳಿದವರ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ. ಈ ಮಧ್ಯೆ ಪ್ರಮುಖ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾ ಸೇರಿದಂತೆ ಎಲ್ಲರೂ ಜಾಮೀನಿಗಾಗಿ ಕಾದಿದ್ದಾರೆ. ವಾದಕ್ಕೆ ಹೆಚ್ಚಿನ ಸಮಯಾವಕಾಶ ಬೇಕು ಎಂದು ನಟ ದರ್ಶನ್ ಪರ ವಕೀಲರೇ ಬೇಡಿಕೆ ಇಡುತ್ತಿರುವುದರಿಂದ ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ ಹೋಗುತ್ತಿದೆ.
ಇನ್ನೂ ನಟ ದರ್ಶನ್ ಅವರಿಗೆ ಬಳ್ಳಾರಿ ಜೈಲಿನ ವಾತಾವರಣ ಹೊಂದದ್ದೇ ದರ್ಶನ್ ಅವರು ನಿರಂತರವಾಗಿ ಸೊರಗುತ್ತಿದ್ದಾರೆ. ದರ್ಶನ್ ಅವರಿಗೆ ಈವರೆಗೆ ಜಾಮೀನು ಸಿಕ್ಕಿಲ್ಲ. ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಇದರ ಜೊತೆಗೆ ಅವರ ನ್ಯಾಯಾಂಗ ಬಂಧನದ ಅವಧಿ ಕೂಡ ಇಂದಿಗೆ ಪೂರ್ಣಗೊಳ್ಳಲಿದೆ. ಒಂದೊಮ್ಮೆ ನ್ಯಾಯಾಂಗ ಬಂಧನ ವಿಸ್ತರಣೆಯಾದರೆ ದರ್ಶನ್ ಬೆಂಗಳೂರಿಗೆ ಶಿಫ್ಟ್ ಆಗೋ ಸಾಧ್ಯತೆ ಇದೆ.
Poll (Public Option)

Post a comment
Log in to write reviews