
ಬೆಂಗಳೂರು: ಕೊಲೆ ಆರೋಪಿ ದರ್ಶನ್ ಮತ್ತವರ ಗ್ಯಾಂಗ್ ನಿಂದ ಹತ್ಯೆಯಾದ ರೇಣುಕಾಸ್ವಾಮಿಯನ್ನು ಕೂಡಿಹಾಕಿದ್ದ ಶೇಡ್ ಗೆ ದರ್ಶನ್ ತೆರಳುವ ಮೊದಲು, ತನ್ನ ನೆಚ್ಚಿನ ಗೆಳೆಯರೊಂದಿಗೆ ಪಾರ್ಟಿ ಮಾಡಿದ್ದಾರೆ. ಆ ಪಾರ್ಟಿಯಲ್ಲಿ ಹಾಸ್ಯನಟ ಚಿಕ್ಕಣ್ಣ ಕೂಡ ಭಾಗಿಯಾಗಿದ್ದರು ಎಂಬ ಮಾಹಿತಿ ಇದೀಗ ಪೊಲೀಸರಿಗೆ ತಿಳಿದುಬಂದಿದೆ. ಈ ಕುರಿತು ಚಿಕ್ಕಣ್ಣ ಹಾಗು ಪಾರ್ಟಿಯಲ್ಲಿ ಭಾಗಿಯಾಗಿದ್ದ ಕೆಲವರನ್ನು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಈ ಪ್ರಕರಣದಲ್ಲಿ ಮೊದಲಿನಿಂದಲೂ ತನಿಖೆ ನಡೆಸುತ್ತಿರುವ ಅನ್ನಪೂರ್ಣೇಶ್ವರಿನಗರ ಠಾಣೆಯ ಪೊಲೀಸರೇ ಇದೀಗ ಚಿಕ್ಕಣ್ಣನಿಗೂ ಇಂದು ಸಂಜೆಯೇ ನೋಟಿಸ್ ನೀಡಲಿದ್ದಾರೆ. ಬಹುಷಃ ನಾಳೆ ಬೆಳಗ್ಗೆ ಅಥವಾ ಇಂದು ರಾತ್ರಿ ಚಿಕ್ಕಣ್ಣ ವಿಚಾರಣೆಗೆ ಒಳಗಾಗಬಹುದು ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
Poll (Public Option)

Post a comment
Log in to write reviews