
ನಟ ದರ್ಶನ್ ಮತ್ತು ಗ್ಯಾಂಗ್‌ನಿಂದ ಕೊಲೆಯಾದ ರೇಣುಕಾಸ್ವಾಮಿ ಪತ್ನಿ ಸಹನಾ ಬುಧವಾರ (ಅ.16) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೇಣುಕಾಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾಗೆ ಐದು ತಿಂಗಳು. ಇದೀಗ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆ ಆಗಿದ್ದು, ಈ ವಿಚಾರ ಕುಟುಂಬಕ್ಕೆ ಖುಷಿ ಹೆಚ್ಚಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ನಡೆದು ನಾಲ್ಕು ತಿಂಗಳು ಕಳೆದಿದೆ. ಈ ಕೊಲೆ ಮಾಡಿದ್ದು ನಟ ದರ್ಶನ್ ಹಾಗೂ ಗ್ಯಾಂಗ್ ಎನ್ನುವ ಆರೋಪ ಇದೆ. ಈ ಪ್ರಕರಣ ಕೋರ್ಟ್ ಅಂಗಳದಲ್ಲಿ ಇದೆ. ರೇಣುಕಾಸ್ವಾಮಿ ಕೊಲೆಯ ಬಳಿಕ ಇಡೀ ಕುಟುಂಬ ಕಣ್ಣೀರಲ್ಲೇ ಕೈತೊಳೆಯುತ್ತಾ ಬಂದಿದೆ. ಈಗ ನೊಂದಿದ್ದ ಕುಟುಂಬಕ್ಕೆ ಖುಷಿ ಆಗುವಂಥ ಸುದ್ದಿ ಸಿಕ್ಕಿದೆ. ರೇಣುಕಾಸ್ವಾಮಿ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
Poll (Public Option)

Post a comment
Log in to write reviews