
ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘವು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಜೇಷ್ಠತಾ ಪಟ್ಟಿ ಬಿಡುಗಡೆಗೊಳಿಸುವಂತೆ ಆಯುಕ್ತರಿಗೆ ಮನವಿ ಸಲ್ಲಿಸಿದೆ. ದಶಕಗಳಿಂದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ರಾಜ್ಯ ಮಟ್ಟದ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಿರಲಿಲ್ಲ. ಈ ಹಿಂದೆ 22.06.2023 ರಂದು ಕರ್ನಾಟಕ ಉಚ್ಚ ನ್ಯಾಯಾಲಯವು ಪಂಚಾಯತ ರಾಜ್ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ಸದರಿ ಸಮಿತಿಯು ಜೇಷ್ಠತಾ ಪಟ್ಟಿಯನ್ನು ಪ್ರಕಟಿಸುವಂತೆ ಆದೇಶಿಸಿತ್ತು.. ಹಿನ್ನಲೆಯಲ್ಲಿ ಇವತ್ತು ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರ ನೇತೃತ್ವದಲ್ಲಿ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಜೊತೆಯಾಗಿ ಆಯುಕ್ತರನ್ನು ಭೇಟಿ ಮಾಡಿ ಈಗಾಗಲೇ ಕಾಲವಿಳಂಬವಾಗಿದೆ ಹೀಗಾಗಿ ಕೂಡಲೇ ಜೇಷ್ಠತಾ ಪಟ್ಟಿ ಪ್ರಕಟಿಸಲು ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಸ್ಪಂದಿಸಿದ ಆಯುಕ್ತರು ನಾಳೆ ಈ ಪಟ್ಟಿಯನ್ನು ಪ್ರಕಟಿಸುವುದಾಗಿ ತಿಳಿಸಿದ್ದಾರೆ.
Poll (Public Option)

Post a comment
Log in to write reviews