
ಚಿಕ್ಕಮಗಳೂರು: ಜುಲೈ 31ರ ವರೆಗೂ ಮುಳ್ಳಯ್ಯನಗಿರಿ ಭೇಟಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ನಿರಂತರವಾಗಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಸುರಿದ ಮಳೆಯಿಂದ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಭೂ ಕುಸಿತ, ಗುಡ್ಡ ಕುಸಿತವಾಗಿದ್ದು ಒಂದು ವಾರಗಳ ಕಾಲ ಪ್ರವಾಸಿಗರಿಗೆ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಹೊನ್ನಮ್ಮನ ಹಳ್ಳ ಪ್ರವೇಶಕ್ಕೆ ಅವಕಾಶವಿಲ್ಲ ಸ್ಥಳೀಯ ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ನೀಡಲಾಗಿದೆ.
ಪ್ರವಾಸಿಗರು ತೆರಳದಂತೆ ಕೈಮರ ಚೆಕ್ಪೋಸ್ಟ್ ಬಳಿ ಗೇಟ್ ಬಂದ್ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ 169ರ ಮಂಗಳೂರು ಶೃಂಗೇರಿ ಮಾರ್ಗ ಮಧ್ಯೆ ನೆಮ್ಮಾರು ಗ್ರಾಮದ ಬಳಿ ಹತ್ತಾರು ಕಡೆ ಭೂ ಕುಸಿತ, ಗುಡ್ಡ ಕುಸಿತವಾಗಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಲಾಗಿದ್ದು ವಾಹನಗಳಿಗೆ ಸಂಚಾರ ನಿಷೇಧ ಮಾಡಲಾಗಿದೆ.
Poll (Public Option)

Post a comment
Log in to write reviews