
ಉತ್ತರ ಕನ್ನಡ: ಜಿಲ್ಲೆಯ ಪ್ರಸಿದ್ಧ ಜಲಪಾತಗಳಲ್ಲೊಂದಾದ ಅಂಕೋಲ ತಾಲೂಕಿನ ಅಚವೆ ಗ್ರಾಮದಲ್ಲಿರುವ ಪ್ರಸಿದ್ಧ ವಿಭೂತಿ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ವಿಭೂತಿ ಜಲಪಾತ ಮೈದುಂಬಿ ಹರಿಯುತ್ತಿದೆ. ಇದರಿಂದ ಯಾವುದೇ ಕ್ಷಣದಲ್ಲಿ ನೀರಿನ ಪ್ರಮಾಣ ಏರಿಳಿಕೆ ಆಗಬುಹುದು ಮತ್ತು ನೀರಿನಲ್ಲಿ ವಿಷಜಂತುಗಳು, ಮರದ ದಿಮ್ಮಿಗಳು ತೇಲಿಬರುತ್ತಿವೆ. ಇದರಿಂದ ಪ್ರವಾಸಿಗರಿಗೆ ಅಪಾಯವಾಗುವ ಸಂಭವವಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಆಡಳಿತ, ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ತಾತ್ಕಾಲಿಕ ನಿಷೇಧಾಜ್ಞೆ ಹೊರಡಿಸಿದೆ.
Poll (Public Option)

Post a comment
Log in to write reviews