
ಬೆಂಗಳೂರು : ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಆತಹತ್ಯೆಗೆ ಶರಣಾಗಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎಜಿಬಿ ಲೇಔಟ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅಬ್ದುಲ್ ರಷೀದ್(64) ಮೃತಪಟ್ಟ ನಿವೃತ್ತ ಅಧಿಕಾರಿ. ಎಂದು ತಿಳಿದು ಬಂದಿದೆ.
ಅಬ್ದುಲ್ ರಷೀದ್ ಅವರು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಅವರ ಮೇಲೆ ಪ್ರಕರಣವೊಂದು ದಾಖಲಾಗಿದ್ದು, ತನಿಖಾ ಹಂತದಲ್ಲಿದೆ. ಹಾಗಾಗಿ ಅವರಿಗೆ ಇನ್ನು ನಿವೃತ್ತಿ ವೇತನ ಸಿಕ್ಕಿರಲಿಲ್ಲ.
ಆ ಹಣವನ್ನೇ ನಂಬಿಕೊಂಡಿದ್ದ ಅಬ್ದುಲ್ ಅವರು ಇದರಿಂದ ಮನನೊಂದಿದ್ದರು. ನಿನ್ನೆ ಪತ್ನಿ ಸಂಬಂಧಿಕರ ಮನೆಗೆ ಹೋಗಿದ್ದರು. ಮನೆಯಲ್ಲಿ ಇಬ್ಬರು ಮಕ್ಕಳೂ ಇರಲಿಲ್ಲ. ಆ ಸಂದರ್ಭದಲ್ಲಿ ಡೆತ್‌ನೋಟ್ ಬರೆದಿಟ್ಟು, ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದುಕೊಂಡು ಅಬ್ದುಲ್ ರಷೀದ್ ಅವರು ಆತಹತ್ಯೆ ಮಾಡಿಕೊಂಡಿದ್ದಾರೆ.
Poll (Public Option)

Post a comment
Log in to write reviews