
ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣಗೆ ಜನ ಪ್ರತಿನಿಧಿಗಳ ವಿಶೇಷ ಕೋಟ್‌೯ ಜಾಮೀನು ನೀಡಿದೆ.
ಮೇ೧೪ ರಂದು ಪರಪ್ಪನ ಅಗ್ರಹಾರ ಜೈಲಿನಿಂದ ರೇವಣ್ಣ ರಿಲೀಸ್ ಆಗಲಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಲವು ಷರತ್ತುಗಳುನ್ನ ವಿಧಿಸಿ ಬೇಲ್ ಮಂಜೂರು ಮಾಡಿದೆ.
ಜಾಮೀನಿಗೆ ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ , ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಎಸ್ ಐಟಿ ತನಿಖೆಗೆ ಸಹಕರಿಸಬೇಕು ಅನ್ನೋ ಷರತ್ತುಗಳನ್ನು ವಿಧಿಸಿ ಇಂದು ಮಧ್ಯಾಹ್ನ 3 ಗಂಟೆಗೆ ರೇವಣ್ಣರನ್ನು ಬಿಡುಗಡೆ ಮಾಡಲಾಗುತ್ತದೆ. ರೆವಣ್ಣ ಬಿಡುಗಡೆ ಹಿನ್ನಲೆ ರೆವಣ್ಣ ನಿವಾಸದ ಬಳಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.
Tags:
Poll (Public Option)

Post a comment
Log in to write reviews