
ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಯಾವುದಕ್ಕೂ ಪ್ರತಿಕ್ರಿಯಿಸುವುದಿಲ್ಲ ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ.
ಸೋಮವಾರದಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿನ ಬಗ್ಗೆ ನನಗೆ ಗೌರವವಿದೆ. ದೇವರ ಬಗ್ಗೆ ನಂಬಿಕೆಯಿದೆ. ಪ್ರಕರಣ ಕೋರ್ಟ್‌ನಲ್ಲಿರುವುದರಿಂದ ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ ಎಂದರು.
ಮಂಜುನಾಥ ಸ್ವಾಮಿ ಮೇಲೆ ನನಗೆ ನಂಬಿಕೆಯಿದೆ, ರಾಜ್ಯದ ಜನತೆ ಬಗ್ಗೆ, ನ್ಯಾಯಾಲಯದ ಮೇಲೆ ನಂಬಿಕೆ ಇದೆ. ಹಾಸನ ಚಲೋ ಕಾರ್ಯಕ್ರಮದ ಬಗ್ಗೆ ಗೊತ್ತಿಲ್ಲ. ದೇವೆಗೌಡರು ಪತ್ರ ಬರೆದಿರುವ ಬಗ್ಗೆಯೂ ಗೊತ್ತಿಲ್ಲ. ಉಳಿದ ಯಾವುದರ ಬಗ್ಗೆಯೂ ಸದ್ಯ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ದೇವರ ಮೊರೆ
ಕಾನೂನಿನ ಸಂಕಷ್ಟದಲ್ಲಿರುವ ಹೆಚ್.ಡಿ ರೇವಣ್ಣ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಮೊರೆ ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಭಾನುವಾರ ರಾತ್ರಿ ಧರ್ಮಸ್ಥಳಕ್ಕೆ ಆಗಮಿಸಿದ್ದ ರೇವಣ್ಣ, ಸಂಕಷ್ಟ ನಿವಾರಣೆಗಾಗಿ ಮಂಜುನಾಥನ ಪೂಜೆ ನೆರವೇರಿಸಿದ್ದಾರೆ. ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಜೊತೆ ಹೆಚ್.ಡಿ ರೇವಣ್ಣ ಮಾತುಕತೆ ನಡೆಸಿ ಆಶೀರ್ವಾದ ಪಡೆದಿದ್ದಾರೆ,
Poll (Public Option)

Post a comment
Log in to write reviews