
ರಾಮನಗರ: ಬೆಂಗಳೂರು ಗ್ರಾಮಾಂತರ ಬಿಜೆಪಿ ಸಂಸದ ಡಾ.ಸಿ.ಎನ್.ಮಂಜುನಾಥ್, ರಸ್ತೆ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.
ರಾಮನಗರದ ಕನಕಪುರ-ಸಾತನೂರು ಮಾರ್ಗದಲ್ಲಿ ನೂತನ ಸಂಸದ ಡಾ.ಸಿ.ಎನ್.ಮಂಜುನಾಥ್ ಪ್ರಯಾಣಿಸುತ್ತಿದ್ದರು. ಅವರು ಸಂಚರಿಸುತ್ತಿದ್ದ ಮಾರ್ಗದ ಮಧ್ಯೆ ಅಪಘಾತ ಸಂಭವಿಸಿತ್ತು. ಅಪಘಾತವನ್ನು ನೋಡಿ ತಮ್ಮ ಕಾರನ್ನು ನಿಲ್ಲಿಸಿದ ಸಂಸದರು ಗಾಯಾಳುಗಳನ್ನು ಪರೀಕ್ಷಿಸಿದ್ದಾರೆ. ಬಳಿಕ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಅಲ್ಲದೇ ದೂರವಾಣಿ ಕರೆ ಮಾಡಿ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ. ಸಂಸದರ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಈ ಮೂಲಕ ಮತ್ತೊಮ್ಮೆ ಜನರ ಹೃದಯ ಗೆದ್ದಿದ್ದಾರೆ.
Poll (Public Option)

Post a comment
Log in to write reviews