
ಬಾಗಲಕೋಟೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನ್ಯಾಯ ಒದಗಿಸಲು ಕೋರಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಅಪಘಾತದಲ್ಲಿ ಮೃತಪಟ್ಟಾಗ ಸೂಕ್ತ ರೀತಿಯಲ್ಲಿ ಇಲಾಖೆ ಸ್ಪಂದಿಸಿಲ್ಲ ಎಂದು ಕುಟುಂಬಸ್ಥರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಾದಾಮಿ ತಾಲೂಕು ಚಿಕ್ಕ ಮುಚ್ಚಳಗುಡ್ಡ ಗ್ರಾಮದ ಸಿದ್ದನಗೌಡ ಫೆ. 11ರಂದು ಕೆರೂರ್ನ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದರು. ಇದು ಕೆರೂರ್ ಪೊಲೀಸ್ ಠಾಣೆ ವ್ಯಾಪ್ತಿಯ ಸ್ಥಳವಾಗಿದ್ದು ಕುಟುಂಬಸ್ಥರು ಠಾಣೆಗೆ 8-10 ಬಾರಿ ಅಲೆದಾಡಿದರೂ ಪೊಲೀಸರು ದೂರು ದಾಖಲಿಸಿಕೊಳ್ಳಲು ಅಲೆದಾಡಿಸಿದ್ದರು. ಈ ಸಂಬಂಧ ಫೆ. 28ರಂದು ನಡೆದ ಎಸ್ಸಿ ಎಸ್ಟಿ ಕುಂದು ಕೊರತೆ ಸಭೆಯಲ್ಲಿ ಮೇಲಾಧಿಕಾರಿಗಳಿಗೆ ತಿಳಿಸಿದ್ದರೂ ಯಾವುದೆ ಪ್ರಯೋಜವಾಗಿಲ್ಲ ಈ ಸಂಬಂಧ ಜಿಲ್ಲಾಧಿಕಾರಿ ಕಛೇರಿ ಎದುರು ಮೃತನ ಬ್ಯಾನರ್ ಹಿಡಿದು ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವ ಚಿತ್ರ ಹಿಡಿದು ಕುಟುಂಬಸ್ಥರು ಪ್ರತಿಭಟನೆ ನಡೆಸಿದರು.
Poll (Public Option)

Post a comment
Log in to write reviews