ಬೆಂಗಳೂರು :ಮಲ್ಲೇಶ್ವರಂ ನಗರದ ರಾಜಾಶಂಕರ್ ಆಟದ ಮೈದಾನದಲ್ಲಿ ಗೇಟ್ ಬಿದ್ದು ಮೃತಪಟ್ಟಿದ್ದ ಬಾಲಕ ನಿರಂಜನ್ ಕುಟುಂಬಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಜೊತೆಗೆ ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಇನ್ನು ಆಟದ ಮೈದಾನದಲ್ಲಿ ನಿರ್ಲಕ್ಷ್ಯ ತೋರಿರುವ ಸಹಾಯಕ ಎಂಜಿನಿಯರ್ ಶ್ರೀನಿವಾಸ್ ರಾಜು ಅಮಾನತಿಗೆ ಆದೇಶಿಸಿದ್ದಾರೆ. ಸಹಾಯಕ ಕಾರ್ಯಪಾಲಕ ಇಂಜಿನಿಯರ್ಗಳಾದ ಕೆ. ಶಾಂತಲಾ, ದೇವರಾಜು, ಬೇಬಿ ಆಯೇಷಾ ಹುಸೇನ್ರನ್ನ ಅಮಾನತುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಅಷ್ಟೇ ಅಲ್ಲದೇ ಕಾರ್ಯಪಾಲಕ ಇಂಜಿನಿಯರ್ ಎಲ್.ವೆಂಕಟೇಶ್ಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಇತ್ತ ಆಟದ ಮೈದಾನದ ಸಂಪೂರ್ಣ ಕಾಮಗಾರಿಯ ಕುರಿತು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ.
Post a comment
Log in to write reviews