ಭಾರತ
ರಷ್ಯಾ- ಉಕ್ರೇನ್ ಯುದ್ಧ : ಕೈವ್ನಲ್ಲಿ ಝೆಲೆನ್ಸ್ಕಿಯನ್ನು ತಬ್ಬಿಕೊಂಡ ಪ್ರಧಾನಿ ನರೇಂದ್ರ ಮೋದಿ

ಕೈವ್ :ಇದೇ ಮೊದಲ ಬಾರಿಗೆ ಉಕ್ರೇನ್ಗೆ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡಿರುವುದರಿಂದ ಇಂದಿನ ಪ್ರಧಾನಿ ನರೇಂದ್ರ ಮೋದಿ ಅವರ ಕೈವ್ ಭೇಟಿ ಭಾರೀ ಮಹತ್ವ ಪಡೆದುಕೊಂಡಿದೆ.
ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ನಡೆಯುತ್ತಿರುವ ಬೆನ್ನಲ್ಲೇ ಭಾರತದ ಪಿಎಂ ಮೋದಿ ಉಕ್ರೇನ್ಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ತಬ್ಬಿಕೊಂಡು, ಸಂತಾಪ ಸೂಚಿಸಿದರು
30 ವರ್ಷಗಳ ಹಿಂದೆ ಭಾರತ ಮತ್ತು ಉಕ್ರೇನ್ ನಡುವೆ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿದ ನಂತರ ದೇಶಕ್ಕೆ ಕಾಲಿಟ್ಟ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪ್ರಧಾನಿ ಮೋದಿ ಅವರ ಉಕ್ರೇನ್ ಭೇಟಿ ಐತಿಹಾಸಿಕವಾಗಿದೆ. ಈ ಭೇಟಿಯ ವೇಳೆ ಉಕ್ರೇನ್ ಮತ್ತು ರಷ್ಯಾ ನಡುವಿನ ನಡೆಯುತ್ತಿರುವ ಸಂಘರ್ಷಕ್ಕೆ ರಾಜತಾಂತ್ರಿಕ ಪರಿಹಾರಕ್ಕಾಗಿ ಮೋದಿ ಸಲಹೆ ನೀಡುತ್ತಾರೆ ಎಂದು ತಿಳಿದು ಬಂದಿದೆ
Poll (Public Option)

Post a comment
Log in to write reviews