ಟಾಪ್ 10 ನ್ಯೂಸ್
ಸಚಿನ್ ತೆಂಡೂಲ್ಕರ್ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ವೈಯಕ್ತಿಕ ಭದ್ರತಾ ಸಿಬ್ಬಂದಿ ಸರ್ವೀಸ್ ಗನ್ ನಿಂದ ಕುತ್ತಿಗೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ರಾಜ್ಯ ಮೀಸಲು ಪೊಲೀಸ್ ಪಡೆ (ಎಸ್‌ಆರ್‌ಪಿಎಫ್) ನಲ್ಲಿ ಕೋಲಾಹಲವನ್ನು ಸೃಷ್ಟಿಸಿದೆ.
ಮಹಾರಾಷ್ಟ್ರ ರಾಜ್ಯ ಮೀಸಲು ಪೊಲೀಸ್ ಪಡೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಾಮ್ನೇರ್‌ನ ಪ್ರಕಾಶ್ ಕಾಪ್ಡೆ (39) ಸಚಿನ್ ತೆಂಡೂಲ್ಕರ್ ಅವರ ಗನ್ಮ್ಯಾನ್ ಆಗಿ ನಿಯೋಜನೆಗೊಂಡಿದ್ದರು. ಇತ್ತೀಚೆಗಷ್ಟೇ ಕರ್ತವ್ಯಕ್ಕೆ ರಜೆ ಪಡೆದು ಮನೆಯಲ್ಲೇ ಇದ್ದರು ಎನ್ನಲಾಗಿದೆ. ಬುಧವಾರ ಮಧ್ಯರಾತ್ರಿ 1.30ರ ಸುಮಾರಿಗೆ ಸರ್ವೀಸ್ ಗನ್ ನಿಂದ ಕುತ್ತಿಗೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಗಮನಿಸಿದ ಕುಟುಂಬಸ್ಥರು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಪ್ರಕಾಶ್ ಅದಾಗಲೇ ಮೃತಪಟ್ಟಿದ್ದರು. ಇದು ಅವರ ಕುಟುಂಬದಲ್ಲಿ ತೀವ್ರ ದುಃಖವನ್ನುಂಟು ಮಾಡಿದೆ.
Tags:
Poll (Public Option)

Post a comment
Log in to write reviews