2024-09-19 09:04:49

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅವಧಿ ಮೀರಿದ ಆಹಾರ ಮಾರಾಟ: ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು ; ಬಸ್ ನಿಲ್ದಾಣದಲ್ಲಿ ಆಹಾರ ಉದ್ಯಮಿಗಳಲ್ಲಿ ಅವಧಿ ಮೀರಿದ ಆಹಾರವನ್ನು ಜನಸಾಮಾನ್ಯರಿಗೆ ನೀಡಿದರೆ ಮಾಲೀಕರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ‌ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಬಸ್‌ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಮಾಡುವಿಕೆ, ನೈರ್ಮಲ್ಯದ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಿತ್ತರವಾದ ವರದಿಗಳನ್ನು ಆಧರಿಸಿ ಅಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.
ವ್ಯಾಪಾರ ಮಳಿಗೆಗಳು ಹಾಗೂ ಆಹಾರ ಉದ್ದಿಮೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲು 2024ರ ಜೂನ್‌ ತಿಂಗಳಲ್ಲಿ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿರುತ್ತದೆ.
ಅದರಂತೆ ರಾಜ್ಯಾದ್ಯಂತ 201 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಕಚೇರಿ ಹಾಗೂ ಖಾಸಗಿ ಬಸ್‌ ನಿಲ್ದಾಣಗಳಲ್ಲಿ ಇರುವ 748 ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುವಂತೆ ಅರಿವು ಮೂಡಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ಪುನರ್‌ ಪರಿಶೀಲನೆ ಸಂದರ್ಭದಲ್ಲಿ ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಾಮಾನುಸಾರ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಾಲೀಕರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
 

Post a comment

No Reviews