2024-12-24 06:36:27

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲೇ ಹೊಸ ಇತಿಹಾಸ ಸೃಷ್ಟಿಸಿದ ಸೌದ್ ಶಕೀಲ್

Pakistan vs Bangladesh: ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಪ್ರಥಮ ಇನಿಂಗ್ಸ್​ನಲ್ಲಿ ಪಾಕಿಸ್ತಾನ್ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಮಳೆಬಾಧಿತ ಈ ಪಂದ್ಯದಲ್ಲಿ ಮೊದಲ ದಿನದಾಟದಲ್ಲಿ 41 ಓವರ್​ಗಳನ್ನು ಆಡಲಾಗಿದ್ದು, ಈ ವೇಳೆ 4 ವಿಕೆಟ್ ಕಳೆದುಕೊಂಡು 158 ರನ್ ಕಲೆಹಾಕಿದೆ. ಈ ಮೂಲಕ ಮೊದಲ ದಿನದಾಟದಲ್ಲಿ ಪಾಕ್ ಪಡೆ ಉತ್ತಮ ಪ್ರದರ್ಶನ ನೀಡಿದೆ.

ರಾವಲ್ಪಿಂಡಿಯಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಪಾಕಿಸ್ತಾನ್ ಬ್ಯಾಟರ್ ಸೌದ್ ಶಕೀಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ 65 ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಪಾಕಿಸ್ತಾನ್ ಕೇವಲ 16 ರನ್​ಗಳಿಗೆ 3 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಜೊತೆಯಾದ ಸೈಮ್ ಅಯ್ಯೂಬ್ (56) ಹಾಗೂ ಸೌದ್ ಶಕೀಲ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

ಅದರಲ್ಲೂ 92 ಎಸೆತಗಳನ್ನು ಎದುರಿಸಿದ ಸೌದ್ ಶಕೀಲ್ 5 ಫೋರ್​ಗಳೊಂದಿಗೆ ಅಜೇಯ 57 ರನ್ ಬಾರಿಸಿ ತಂಡಕ್ಕೆ ಆಸೆಯಾಗಿ ನಿಂತರು. ಈ ಅರ್ಧಶತಕದೊಂದಿಗೆ ಸೌದ್ ಟೆಸ್ಟ್ ಕ್ರಿಕೆಟ್​ನಲ್ಲಿ 1000 ರನ್​ಗಳನ್ನು ಪೂರೈಸಿದ್ದಾರೆ. ಅದು ಸಹ ಕೇವಲ 11 ಪಂದ್ಯಗಳ ಮೂಲಕ ಎಂಬುದು ವಿಶೇಷ.

ಇದರೊಂದಿಗೆ ಪಾಕಿಸ್ತಾನ್ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 1000 ರನ್ ಪೂರೈಸಿದ ಬ್ಯಾಟರ್ ಎಂಬ ದಾಖಲೆಯನ್ನು ಸೌದ್ ಶಕೀಲ್ ಸರಿಗಟ್ಟಿದ್ದರು. ಇದಕ್ಕೂ ಮುನ್ನ ಈ ದಾಖಲೆ ಸಯೀದ್ ಅಹ್ಮದ್ ಅವರ ಹೆಸರಿನಲ್ಲಿತ್ತು. ಇದೀಗ 6 ದಶಕಗಳ ಹಳೆಯ ದಾಖಲೆಯನ್ನು ಸೌದ್ ಸರಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

1959 ರಲ್ಲಿ ಸಯೀದ್ ಅಹ್ಮದ್ 20 ಇನಿಂಗ್ಸ್​ಗಳ ಮೂಲಕ 1000 ರನ್​ ಪೂರೈಸಿ ಪಾಕಿಸ್ತಾನ್ ಪರ ಟೆಸ್ಟ್​ನಲ್ಲಿ ಅತೀ ವೇಗವಾಗಿ ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಬರೆದಿದ್ದರು. ಇದಾದ ಬಳಿಕ ಈ ದಾಖಲೆಯನ್ನು ಸರಿಗಟ್ಟಲು ಯಾರಿಂದಲೂ ಸಾಧ್ಯವಾಗಿರಲಿಲ್ಲ.

ಇದೀಗ ಎಡಗೈ ದಾಂಡಿಗ ಸೌದ್ ಶಕೀಲ್ ಈ ಸಾಧನೆಯನ್ನು ಪುನರಾವರ್ತಿಸುವಲ್ಲಿ ಯಶಸ್ವಿಯಾಗಿದ್ದಾರೆ. 11 ಟೆಸ್ಟ್ ಪಂದ್ಯಗಳಲ್ಲಿ 20 ಇನಿಂಗ್ಸ್ ಆಡಿರುವ ಸೌದ್ 1024 ರನ್ ಕಲೆಹಾಕಿದ್ದಾರೆ. ಈ ಮೂಲಕ 65 ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟಿ ಸೌದ್ ಶಕೀಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

Post a comment

No Reviews